ಬೆಂಗಳೂರು: ಮೈಕೋ ಲೇಔಟ್ ಪೊಲೀಸರು ಕಾರ್ಯಾಚರಣೆ ನಡೆಸಿ ದ್ವಿಚಕ್ರ ವಾಹನ ಕಳ್ಳತನ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಶೋಕಿಗಾಗಿ ಆರೋಪಿಗಳು ಬೆಂಗಳೂರಿನಲ್ಲಿ ಕಳ್ಳತನ ಮಾಡುತ್ತಿದ್ದರು.
ಬೆಂಗಳೂರಿನ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳ್ಳತನ ಮಾಡಿದ್ದ ಪ್ರಕರಣಗಳು ಬೆಳಕಿಗೆ ಬಂದಿದೆ. ಇನ್ನೂ ಆರೋಪಿಗಳಿಂದ 11 ಲಕ್ಷ ಮೌಲ್ಯದ 29 ದ್ವಿಚಕ್ರ ವಾಹನ ಸೀಜ್ ಮಾಡಲಾಗಿದ್ದು, ಘಟನೆ ಸಂಬಂಧ ಮೈಕೋ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



