HomeAgricultureಜೋಳ ಖರೀದಿಗೆ ಬೆಂಬಲ ಬೆಲೆ : ಗೋವಿಂದರೆಡ್ಡಿ

ಜೋಳ ಖರೀದಿಗೆ ಬೆಂಬಲ ಬೆಲೆ : ಗೋವಿಂದರೆಡ್ಡಿ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ : 2024-25ನೇ ಸಾಲಿನ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ರೈತರಿಂದ ಎಫ್‌ಎಕ್ಯೂ ಗುಣಮಟ್ಟದ ಬಿಳಿ ಜೋಳ ಉತ್ಪನ್ನವನ್ನು ಖರೀದಿಸಲು ಬೆಂಬಲ ಬೆಲೆ ನಿಗದಿಪಡಿಸಲಾಗಿದೆ.

ನೋಂದಣಿ ಪ್ರಕ್ರಿಯೆಯಲ್ಲಿ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಕ್ರಮ ವಹಿಸಬೇಕೆಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ತಿಳಿಸಿದರು.

ಜಿಲ್ಲಾಧಿಕಾರಿಗಳ ಸಭಾಭವನದಲ್ಲಿ 2024-25ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಜೋಳ ಕೃಷಿ ಹುಟ್ಟುವಳಿ ಖರೀದಿಸುವ ಕುರಿತು ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸರ್ಕಾರದ ಮಾನದಂಡಗಳನ್ವಯ ಎಫ್‌ಎಕ್ಯೂ ಗುಣಮಟ್ಟವನ್ನು ದೃಢೀಕರಿಸಲು ಕ್ರಮ ವಹಿಸಬೇಕು. ಖರೀದಿ ಏಜೆನ್ಸಿಯವರು ತಮ್ಮ ಸಂಸ್ಥೆಯ ಹಿರಿಯ ಅಧಿಕಾರಿಗಳು ಮೇಲುಸ್ತುವಾರಿ ತಪಾಸಣೆ ಕೈಗೊಳ್ಳಬೇಕು. ಪ್ರತಿ ಖರೀದಿ ಕೇಂದ್ರಕ್ಕೆ ಗ್ರೇಡರ್‌ಗಳನ್ನು ನೇಮಿಸಬೇಕು ಎಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಸೂಚಿಸಿದರು.

ಆಹಾರ ಇಲಾಖೆಯ ಜಂಟಿ ನಿರ್ದೇಶಕ ವಿನೋದಕುಮಾರ್ ಹೆಗ್ಗಳಗಿ ಮಾತನಾಡಿ, ಸರ್ಕಾರದ ಆದೇಶದನ್ವಯ ಮುಂಗಾರು ಋತುವಿನ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ರೈತರಿಂದ ಎಫ್‌ಎಕ್ಯೂ ಗುಣಮಟ್ಟದ ಬಿಳಿ ಜೋಳ ಉತ್ಪನ್ನವನ್ನು ಖರೀದಿಸಲು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ (ಮಾರ್ಕ್ಫೆಡ್) ಸಂಸ್ಥೆಯನ್ನು ರಾಜ್ಯದ ವತಿಯಿಂದ ಖರೀದಿ ಸಂಸ್ಥೆಯನ್ನಾಗಿ ನೇಮಿಸಿ ಆದೇಶಿಸಿದೆ. ಸರ್ಕಾರದ ಆದೇಶದನ್ವಯ ಬಿಳಿಜೋಳ- ಹೈಬ್ರೀಡ್-ಪ್ರತಿ ಕ್ವಿಂಟಾಲ್ ಗೆ 3371 ರೂ. ಹಾಗೂ ಬಿಳಿ ಜೋಳ-ಮಾಲ್ದಂಡಿ-ಪ್ರತಿ ಕ್ವಿಂಟಾಲ್ ಗೆ 3421 ರೂ. ಬೆಂಬಲ ಬೆಲೆ ನಿಗದಿಪಡಿಸಲಾಗಿದೆ ಎಂದು ಸಭೆಗೆ ವಿವರಿಸಿದರು.

ಗದಗ-ಎಪಿಎಂಸಿ ಮಾರುಕಟ್ಟೆ ಪ್ರಾಂಗಣ, ಲಕ್ಷ್ಮೇಶ್ವರ-ಎಪಿಎಂಸಿ ಮಾರುಕಟ್ಟೆ ಪ್ರಾಂಗಣ, ಮುಂಡರಗಿ- ಎಪಿಎಂಸಿ ಮಾರುಕಟ್ಟೆ ಪ್ರಾಂಗಣ, ರೋಣ-ಎಪಿಎಂಸಿ ಮಾರುಕಟ್ಟೆ ಪ್ರಾಂಗಣಗಳಲ್ಲಿ ಖರೀದಿ ಕೇಂದ್ರಗಳು ಕಾರ್ಯ ನಿರ್ವಹಿಸಲಿವೆ.

ಸಭೆಯಲ್ಲಿ ಜಂಟಿ ಕೃಷಿ ನಿರ್ದೇಶಕರು, ಸಹಕಾರಿ ಸಂಘಗಳ ಇಲಾಖೆಯ ಉಪನಿಬಂಧಕರು, ಕೃಷಿ ಉತ್ಪನ್ನ ಮಾರುಕಟ್ಟಿ ಸಮಿತಿ ಕಾರ್ಯದರ್ಶಿಗಳು, ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

ಕೇಂದ್ರ ಸರ್ಕಾರದ ಹಾಗೂ ರಾಜ್ಯ ಸರ್ಕಾರದ ಬೆಂಬಲ ಬೆಲೆ ಖರೀದಿ ಮಾರ್ಗಸೂಚಿಗಳನ್ವಯ ಬಿಳಿ ಜೋಳ ಉತ್ಪನ್ನ ಖರೀದಿಗೆ 1-12-2024ರಿಂದ ನೋಂದಣಿ ಕಾರ್ಯ ಕೈಗೊಳ್ಳುವುದು. ಹಾಗೂ 1-1-2025ರಿಂದ 31-3-2025ರ ಅವಧಿಯಲ್ಲಿ ಖರೀದಿ ಪ್ರಕ್ರಿಯೆ ಜರುಗಿಸುವುದು. ಜಿಲ್ಲೆಯ 4 ಕಡೆ ಖರೀದಿ ಕೇಂದ್ರಗಳನ್ನು ತೆರೆಯಲು ತೀರ್ಮಾನಿಸಲಾಯಿತು.

 


Spread the love

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!