ಬೆಂಗಳೂರು:– ಪಾಪಿ ಮಗನೋರ್ವ ಚಾಕುವಿನಿಂದ ಇರಿದು ತಾಯಿಯ ಹತ್ಯೆಗೈದಿರುವ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ಜರುಗಿದೆ.
Advertisement
ಕೆಲಸಕ್ಕೆ ಹೋಗುವಂತೆ ಬುದ್ಧಿ ಮಾತು ಹೇಳಿದ್ದಕ್ಕೆ ಚಾಕುವಿನಿಂದ ಇರಿದು ತಾಯಿಯನ್ನು ಕೊಲೆ ಮಾಡಿದ್ದಾರೆ. 50 ವರ್ಷದ ಆಯೇಷಾ ಮೃತ ತಾಯಿ ಎನ್ನಲಾಗಿದೆ. 32 ವರ್ಷದ ಶುಫಿಯಾನ್ ಎಂಬ ಮಗನಿಂದ ಕೃತ್ಯ ನಡೆದಿದೆ. ಇಂದು ಬೆಳಗ್ಗೆ 10 ಗಂಟೆಗೆ ಈ ಘಟನೆ ನಡೆದಿದೆ. ಕೆಲಸಕ್ಕೆ ಹೋಗದೇ ಮನೆಯಲ್ಲಿದ್ದ ಮಗನಿಗೆ ಕೆಲಸಕ್ಕೆ ಹೋಗುವಂತೆ ತಾಯಿ ಬುದ್ಧಿ ಮಾತು ಹೇಳಿದ್ದಾರೆ.
ಈ ವೇಳೆ ತಾಯಿ ಹಾಗೂ ಮಗನ ನಡುವೆ ಗಲಾಟೆ ನಡೆದಿದೆ. ಗಲಾಟೆಯಾಗುವಾಗ ಮನೆಯಲ್ಲಿದ್ದ ಚಾಕುವಿನಿಂದ ಇರಿದು ತಾಯಿಯನ್ನು ಕೊಲೆ ಮಾಡಿದ್ದಾನೆ. ಬಳಿಕ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.