HomePolitics Newsಕಾಂಗ್ರೆಸ್ಸಿನ ಪ್ರಭಾವಿ ನಾಯಕರೇ ವಕ್ಫ್ 29,000 ಎಕರೆ ಆಸ್ತಿ ಹೊಡೆದಿದ್ದಾರೆ: ಜೋಶಿ ಆರೋಪ

ಕಾಂಗ್ರೆಸ್ಸಿನ ಪ್ರಭಾವಿ ನಾಯಕರೇ ವಕ್ಫ್ 29,000 ಎಕರೆ ಆಸ್ತಿ ಹೊಡೆದಿದ್ದಾರೆ: ಜೋಶಿ ಆರೋಪ

For Dai;y Updates Join Our whatsapp Group

Spread the love

ಹುಬ್ಬಳ್ಳಿ: ಕಾಂಗ್ರೆಸ್ಸಿನ ಪ್ರಭಾವಿ ನಾಯಕರೇ ವಕ್ಫ್‌ 29,000 ಎಕರೆ ಆಸ್ತಿ ಹೊಡೆದಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆರೋಪಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ಸಿನ ಪ್ರಭಾವಿ ನಾಯಕರೇ ವಕ್ಫ್ ಆಸ್ತಿ ಹೊಡೆದಿದ್ದಾರೆ. ಅನ್ವರ್ ಮಾನಪ್ಪಾಡಿ ವರದಿ ಪ್ರಕಾರ,

ಕಾಂಗ್ರೆಸ್ಸಿನ ಅತ್ಯಂತ ಪ್ರಭಾವಿ ನಾಯಕರೇ ವಕ್ಫ್‌ 29,000 ಎಕರೆ ಆಸ್ತಿ ಹೊಡೆದಿದ್ದಾರೆ. ವಿಧಾನ ಪರಿಷತ್ತಿನ ಹಕ್ಕು ಭಾದ್ಯತಾ ಸಮಿತಿ ಸಹ ಮಾನಪ್ಪಾಡಿ ವರದಿ ಪರಿಶೀಲನೆ ಮಾಡಿ ಮತ್ತೊಂದು ವರದಿ ಕೊಟ್ಟಿದೆ. ವಕ್ಫ್ ಆಸ್ತಿ ದುರುಪಯೋಗ ಆಗಿದೆ ಎಂಬ ಅಂಶ ಅದರಲ್ಲಿದೆ ಎಂದು ತಿಳಿಸಿದರು.ಇನ್ನೂ ಕಾಂಗ್ರೆಸ್ಸಿನವರು ಬುದ್ಧಿ ಇದ್ದು ಮಾಡುತ್ತಿದ್ದಾರೋ? ಬುದ್ಧಿ ಇಲ್ಲದೇ ಮಾಡ್ತಾ ಇದ್ದಾರೋ ಗೊತ್ತಿಲ್ಲ.

ಬಿಜೆಪಿ ವಕ್ಫ್ ಆಸ್ತಿ ಸಂರಕ್ಷಣೆ ಮಾಡುತ್ತದೆ ಎನ್ನುತ್ತ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ವಕ್ಫ್ ಆಸ್ತಿಯನ್ನು ಸಂರಕ್ಷಿಸುವ ಕೆಲಸವನ್ನು ಬಿಜೆಪಿ ಹಿಂದೆಯೂ ಮಾಡಿದೆ, ಮುಂದೆಯೂ ಮಾಡುತ್ತದೆ. ಆದರೆ ವಕ್ಫ್ ಹೆಸರಲ್ಲಿ ಭೂಗಳ್ಳರು ಬಡವರ, ರೈತರ, ಜನಸಾಮಾನ್ಯರ ಆಸ್ತಿ ಕಬಳಿಸಲು ಹೊರಟರೆ ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!