ವಿಜಯಸಾಕ್ಷಿ ಸುದ್ದಿ, ಬೆಳಗಾವಿ
ಪಕ್ಷದಲ್ಲಿ ಭಿನ್ನಮತ, ಅಸಮಾಧಾನ ಸಹಜವಾಗಿಯೇ ಇರುತ್ತವೆ. ಯಾರಿಗೆ ಮಂತ್ರಿ ಸ್ಥಾನ ಸಿಕ್ಕಿಲ್ಲ ಅವರಿಗೆ ಬೇಸರ ಆಗಿರುತ್ತದೆ. ಹಾಗಾಗಿ ಬೇಸರದಿಂದ ಅಸಮಾಧಾನ ಹೊರ ಹಾಕುತ್ತಾರೆ.
ಪಕ್ಷದ ಕುಟುಂಬದದಲ್ಲಿರುವ ಅಸಮಾಧಾನವಾಗಿದ್ದು,
ಅವೆಲ್ಲವೂ ಮುಂದಿನ ದಿನಗಳಲ್ಲಿ ಸರಿ ಹೋಗಲಿವೆ ಎಂದು ಡಿಸಿಎಂ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ವಿಶ್ವಾಸ ವ್ಯಕ್ತಪಡಿಸಿದರು.
ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಸಚಿವರು,
ಪಕ್ಷದಲ್ಲಿ ನೋವು ತೊಡಿಕೊಳ್ಳಲು ಮುಕ್ತ ಅವಕಾಶವಿದೆ. ನಮ್ಮ ನಾಯಕರ ಎದುರು ನೋವು ತೋಡಿಕೊಳ್ಳದೇ ಮತ್ಯಾರ ಮುಂದೆ ಹೇಳಿಕೊಳ್ಳಬೇಕು.
ಅಸಮಾಧಾನಿತ ಶಾಸಕರು ನನ್ನ ಸಂಪರ್ಕಕ್ಕೆ ಬಂದಿಲ್ಲ.
ನೋಡೋಣಾ, ಇನ್ನೂ ಸ್ವಲ್ಪ ದಿನಗಳ ಬಳಿಕ ಮಾತನಾಡೋಣ ಎಂದು ತಿಳಿಸಿದರು.
ಸಿಎಂ ಯಡಿಯೂರಪ್ಪಗೆ ಸಿಡಿ ಬ್ಲ್ಯಾಕ್ ಮೇಲ್ ಕುರಿತು
ಯಾವ ಸಿಡಿನೂ ಇಲ್ಲಾ ಗಿಡಿನೂ ಇಲ್ಲ ಎಂದು ಒಂದೇ ವಾಕ್ಯದಲ್ಲಿ ಡಿಸಿಎಂ ಲಕ್ಷ್ಮಣ ಸವದಿ ಉತ್ತರಿಸಿದರು.