ಗದಗ:- ರಸ್ತೆ ದಾಟುವಾಗ ಕಾರು ಡಿಕ್ಕಿ ಹೊಡೆದು ಕಾರ್ಮಿಕ ಸಾವನ್ನಪ್ಪಿದ ಘಟನೆ ಗದಗ ತಾಲೂಕಿನ ಲಕ್ಕುಂಡಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ 67 ರಲ್ಲಿ ಜರುಗಿದೆ.
Advertisement
25 ವರ್ಷದ ಕಲ್ಲಪ್ಪ ಮೃತ ಕಾರ್ಮಿಕ. ಮೆಕ್ಕೆಜೋಳದ ರಾಶಿ ಮಾಡಲು ಕೂಲಿಗೆ ಬಂದಿದ್ದ ವೇಳೆ ಈ ಅವಘಡ ಸಂಭವಿಸಿದೆ.
ಲಕ್ಕುಂಡಿ ಗ್ರಾಮದ ಬಳಿಯ ಹೈವೇಯಲ್ಲಿ ರೈತರು ಮೆಕ್ಕೆಜೋಳ ರಾಶಿ ಮಾಡುತ್ತಿದ್ದರು. ಈ ವೇಳೆ ಕಾರ್ಮಿಕ ಕಲ್ಲಪ್ಪ ಕೂಡ ಕೂಲಿ ಕೆಲಸಕ್ಕೆ ಬಂದಿದ್ದ. ಈ ಸಂದರ್ಭದಲ್ಲಿ ಗದಗದಿಂದ ಕೊಪ್ಪಳ ಕಡೆಗೆ ಹೋಗುವ ಕಾರು ಕಾರ್ಮಿಕನಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಕಾರ್ಮಿಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಸ್ಥಳಕ್ಕೆ ಗದಗ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಘಟನೆಯಿಂದ ಮೃತನ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.