ಎನ್‌ಎಸ್‌ಎಸ್‌ನಿಂದ ನಾಯಕತ್ವ ಗುಣ ವೃದ್ಧಿ : ಎಂ.ಎಸ್. ಮುಲ್ಲಾ

0
Leadership development through NSS
Spread the love

ವಿಜಯಸಾಕ್ಷಿ ಸುದ್ದಿ, ಗದಗ : ರಾಷ್ಟ್ರೀಯ ಸೇವಾ ಯೋಜನೆ ಮಹಾತ್ಮ ಗಾಂಧೀಜಿಯವರ ರಾಮರಾಜ್ಯದ ಕನಸನ್ನು ತಿಳಿಸಿಕೊಡುವಲ್ಲಿ ಸಹಕಾರಿಯಾಗಿದೆ ಎಂದು ಪದವಿಪೂರ್ವ ಶಿಕ್ಷಣ ಇಲಾಖೆಯ ವಿಭಾಗಾಧಿಕಾರಿ ಎಂ.ಎಸ್. ಮುಲ್ಲಾ ಹೇಳಿದರು.

Advertisement

ಅವರು ಗದಗ ತಾಲೂಕಿನ ಬಳಗಾನೂರು ಗ್ರಾಮದ ಚಿಕೇನಕೊಪ್ಪ ಶ್ರೀ ಚನ್ನವೀರ ಶರಣರ ಕಲಾ ಹಾಗೂ ವಾಣಿಜ್ಯ ಪದವಿ ಪೂರ್ವ ಕಾಲೇಜಿನಲ್ಲಿ ಎನ್.ಎಸ್.ಎಸ್ ಘಟಕದ ಕಾರ್ಯಕ್ರಮಗಳನ್ನು ಉದ್ಘಾಟಿಸಿ ಮಾತನಾಡಿ, ರಾಷ್ಟ್ರೀಯ ಸೇವಾ ಯೋಜನೆಯು ಯುವಜನತೆಗೆ ಕೂಡಿ ಬಾಳುವುದನ್ನು ಕಲಿಸುತ್ತದೆ ಮತ್ತು ನಾಯಕತ್ವ ಗುಣವನ್ನು ಬೆಳೆಸುತ್ತದೆ ಎಂದು ಹೇಳಿದರು.

ಶ್ರೀ ಚನ್ನವೀರ ಶರಣರ ವಿದ್ಯಾ ಪೀಠ ಟ್ರಸ್ಟ್ನ ಕಾರ್ಯದರ್ಶಿ ಎಂ.ಬಿ. ಸಿಕ್ಕಿದೇಸಾಯಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಎನ್‌ಎಸ್‌ಎಸ್ ಘಟಕಗಳು ಕೇಂದ್ರ ಹಾಗೂ ರಾಜ್ಯ ಸರಕಾರದ ಸಂಘಟನೆ ಆಗಿರುತ್ತದೆ ಇಂದಿನ ಮಕ್ಕಳು ದುಶ್ಚಟಗಳ ದಾಸರಾಗಿದ್ದಾರೆ. ಆದರೆ, ರಾಷ್ಟ್ರೀಯ ಸೇವಾ ಯೋಜನೆ ಮಕ್ಕಳಲ್ಲಿ ಶಿಸ್ತು, ಸಂಯಮ ಮತ್ತು ಉತ್ತಮ ಆರೋಗ್ಯವನ್ನು ಮೈಗೂಡಿಸಿಕೊಳ್ಳುವಲ್ಲಿ ಮುಖ್ಯ ಪಾತ್ರ ವಹಿಸುತ್ತದೆ ಎಂದರು.

ಪೂಜ್ಯಶ್ರೀ ಶಿವಶಾಂತವೀರ ಶರಣರು ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿ, ಎನ್‌ಎಸ್‌ಎಸ್ ವಿದ್ಯಾರ್ಥಿಗಳು ಸದೃಢ ಸಮಾಜ ಕಟ್ಟಲು ಶ್ರಮಿಸುತ್ತಿದ್ದಾರೆ. ಈ ಮೂಲಕ ಗ್ರಾಮಾಭಿವೃದ್ಧಿ ಮಾಡಿ ಎನ್‌ಎಸ್‌ಎಸ್ ಘಟಕಕ್ಕೆ ಒಳ್ಳೆಯ ಹೆಸರನ್ನು ತರಬೇಕೆಂದು ಹೇಳಿದರು.

ಮುಖ್ಯ ಅತಿಥಿಗಳಾಗಿ ಟ್ರಸ್ಟ್ನ ಸದಸ್ಯರಾದ ವಿ.ಎಸ್. ಹಿರೇಮಠ, ನಿವೃತ್ತ ಪ್ರಾಚಾರ್ಯ ಎಚ್.ಬಿ. ಯಲಬುರ್ಗಿ ಉಪಸ್ಥಿತರಿದ್ದರು. ಡಿ.ಬಿ. ಪಾಟೀಲ ವಂದಿಸಿದರು.


Spread the love

LEAVE A REPLY

Please enter your comment!
Please enter your name here