ಆಜಾದರ ಆದರ್ಶಗಳು ವಿದ್ಯಾರ್ಥಿಗಳಿಗೆ ಪ್ರೇರಣೆ : ಡಾ. ಅವಟಿ

0
National Education Day
Spread the love

ವಿಜಯಸಾಕ್ಷಿ ಸುದ್ದಿ, ಗದಗ : ಭಾರತ ದೇಶದ ಮೊದಲ ಶಿಕ್ಷಣ ಸಚಿವರಾದ ಮೌಲಾನಾ ಆಜಾದ್ ಅವರ ಜನ್ಮದಿನದ ನಿಮಿತ್ತ ತೋಂಟದಾರ್ಯ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸೋಮವಾರ ರಾಷ್ಟ್ರೀಯ ಶಿಕ್ಷಣ ದಿನವನ್ನು ಆಚರಿಸಲಾಯಿತು.

Advertisement

ಕಾರ್ಯಕ್ರಮವನ್ನು ಉದ್ಘಾಟಿಸಿದ ಪ್ರಾಂಶುಪಾಲ ಡಾ. ಎಮ್.ಎಮ್. ಅವಟಿ ಮಾತನಾಡಿ, ಮೌಲಾನಾ ಆಜಾದ್ ಅವರ ಆದರ್ಶಗಳು ಮತ್ತು ಶಿಕ್ಷಣ ಕ್ಷೇತ್ರಕ್ಕೆ ಅವರ ಕೊಡುಗೆಗಳು ಪ್ರತಿ ವಿದ್ಯಾರ್ಥಿ ಮತ್ತು ಶಿಕ್ಷಕರಿಗೆ ಪ್ರೇರಣೆಯಾಗಿದೆ. ಭಾರತದಲ್ಲಿ ಸಮಾನತೆ, ಸರ್ವತೋಮುಖ ಪ್ರಗತಿ ಮತ್ತು ಸಾಮಾಜಿಕ ಶ್ರೇಯಸ್ಸಿಗಾಗಿ ಶಿಕ್ಷಣದ ಅವಶ್ಯಕತೆಯನ್ನು ಅವರು ಪ್ರಮುಖವಾಗಿ ಮನದಟ್ಟು ಮಾಡಿದರು ಎಂದರು.

ವಿದ್ಯಾರ್ಥಿಗಳಿಗಾಗಿ ಪ್ರೊ. ಮಲ್ಲಿಕಾರ್ಜುನ ಜಿ.ಡಿ. ಮತ್ತು ಪ್ರೊ. ತೆಹಸಿನ್ ಶಿಗ್ಲಿ ಅವರು ಆಯೋಜಿಸಿದ್ದ ವಿಶೇಷ ಕಾರ್ಯಕ್ರಮದಲ್ಲಿ, ಆಜಾದ್ ಅವರ ಜೀವನದ ಘಟ್ಟಗಳು ಮತ್ತು ಶಿಕ್ಷಣ ಕುರಿತ ಅವರ ವಿಶಿಷ್ಟ ಚಿಂತನೆಗಳನ್ನು ಹಂಚಿಕೊಳ್ಳಲಾಯಿತು. ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ, ಶಿಕ್ಷಣದ ಪ್ರಾಮುಖ್ಯತೆ ಮತ್ತು ಅದರ ಸಾಂಸ್ಕೃತಿಕ ಬದಲಾವಣೆಯಲ್ಲಿ ಪಾತ್ರವನ್ನು ವಿದ್ಯಾರ್ಥಿಗಳಿಗೆ ತಿಳಿಸಲಾಯಿತು.

`ಶಿಕ್ಷಣದ ಹೆಜ್ಜೆ’ ಸಾಂಸ್ಕೃತಿಕ ಹಬ್ಬದಲ್ಲಿ ಪ್ರೊ. ಜಗದೀಶ ಶಿವನಗುತ್ತಿ ಅವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಭಾಗವಹಿಸಿದರು. `ಜ್ಞಾನದಲ್ಲಿ ಬಲವಿದೆ’ ಎಂಬ ಘೋಷಣೆ ಮೂಲಕ, ಶಿಕ್ಷಣದ ಮೌಲ್ಯಗಳನ್ನು ಸಾರಿದರು.

ಕಾರ್ಯಕ್ರಮದಲ್ಲಿ ಪ್ರೊ. ಗೌತಮ ರೇವಣಕರ, ಪ್ರೊ. ದಯಾನಂದ ಗೌಡರ, ಪ್ರೊ. ಲೋಕೇಶ, ಪ್ರೊ. ರಮೇಶ ಬಡಿಗೇರ, ಪ್ರೊ. ಆರ್. ವಿ. ಕಡಿ, ಪ್ರೊ. ಐ. ಎಸ್. ಪಾಟೀಲ, ಪ್ರೊ. ಅಶ್ವಿನಿ ಅರಳಿ, ಪ್ರೊ. ಶೈಲಜಾ ಮುದೇನಗುಡಿ, ಪ್ರೊ. ಲೋಹಿತ್, ಪ್ರೊ. ಪ್ರಸನ್ನ ನಾಡಗೌಡ, ಪ್ರೊ. ಸುನೀಲ ಪಾಟೀಲ, ಪ್ರೊ. ವೀರೇಶ ಮಾಗಳದ, ಪ್ರೊ. ವಿಜಯಕುಮಾರ ಮಾಲಗಿತ್ತಿ, ಪ್ರೊ. ಮಹಾಂತ ಕಟ್ಟಿಮನಿ, ಪ್ರೊ. ಬಸವರಾಜ ಪಾಟೀಲ ಮುಂತಾದವರಿದ್ದರು.

ಎಲೆಕ್ಟ್ರಿಕಲ್ ವಿಭಾಗದ ಮುಖ್ಯಸ್ಥರಾದ ಡಾ. ಈರಣ್ಣ ಕೋರಚಗಾಂವ ಮಾತನಾಡಿ, ಸಮಾಜದ ಪ್ರಗತಿಗೆ ಮತ್ತು ಭಿನ್ನ ಭಾಷೆಗಳು, ಸಂಸ್ಕೃತಿಗಳು ಹಾಗೂ ಸಾಂಸ್ಕೃತಿಕ ವೈವಿಧ್ಯತೆಯನ್ನು ಸೇರುವ ಸೇತುವೆಯಾಗಿರುವ ಶಿಕ್ಷಣದ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದರು.

 


Spread the love

LEAVE A REPLY

Please enter your comment!
Please enter your name here