ಮಾದಕ ವ್ಯಸನದ ವಿರುದ್ಧ ಬೆಂಗಳೂರು ಪೊಲೀಸ್ ಸಮರ: 64 ಮಂದಿ ಅರೆಸ್ಟ್, 140 ಕೆಜಿ ಗಾಂಜಾ ಸೀಜ್!

0
Spread the love

ಬೆಂಗಳೂರು:- ಮಾದಕ ವ್ಯಸನದ ವಿರುದ್ಧ ಬೆಂಗಳೂರು ಪೊಲೀಸರು ಸಮರ ಸಾರಿದ್ದು, ಕಳೆದ ಒಂದು ತಿಂಗಳಲ್ಲಿ 10 ವಿದೇಶಿ ಪ್ರಜೆಗಳು ಸೇರಿ 64 ಮಂದಿ ಅರೆಸ್ಟ್ ಮಾಡಿದ್ದಾರೆ. ಅಲ್ಲದೇ 140 ಕೆಜಿ ಗಾಂಜಾ ಸೀಜ್ ಮಾಡಿದ್ದಾರೆ.

Advertisement

ಈ ಸಂಬಂಧ ಬೆಂಗಳೂರು ಕಮಿಷನರ್ ದಯಾನಂದ್ ಮಾಹಿತಿ ಕೊಟ್ಟಿದ್ದಾರೆ. ಬಂಧಿತ ಆರೋಪಿಗಳಿಂದ 140 ಕೆಜಿ ಗಾಂಜಾ, 1 ಕೆಜಿ ಗಾಂಜಾ ಆಯಿಲ್, 609 ಗ್ರಾಂ ಆಫೀಮು, 770 ಗ್ರಾಂ ಹೆರಾಯಿನ್, 2ಕೆಜಿ 436 ಗ್ರಾಂ ಚರಸ್, 509 ಗ್ರಾಂ ಕೊಕೇನ್, 5 ಕೆಜಿ 397 ಗ್ರಾಂ ಎಂಡಿಎಂಎ, 2569 LSD ಸ್ಟ್ರಿಪ್, 6 ಕೆಜಿ 725 ಗ್ರಾಂ ಅಂಫಟಮೈನ್, 11,908 ಎಕ್ಸ್ ಟೆಸಿ ಮಾತ್ರೆ ಜಪ್ತಿ ಮಾಡಲಾಗಿದೆ ಎಂದು ತಿಳಿಸಿದರು.

ಸಿಸಿಬಿ ಅಧಿಕಾರಿಗಳ ವಿರುದ್ಧ ಕೇಳಿ ಬಂದಿರುವ ಆರೋಪ ವಿಚಾರವಾಗಿ ಮಾತನಾಡಿದ ಅವರು, ರೇವ್ ಪಾರ್ಟಿ ಕೇಸ್​ನಲ್ಲಿ ತನಿಖೆ ನಡೆಸಿರುವ ಸಿಸಿಬಿ, ನ್ಯಾಯಾಲಯಕ್ಕೆ ಚಾರ್ಶಿಟ್ ಸಲ್ಲಿಕೆ ಮಾಡಿದೆ. ಸಿಸಿಬಿ ಅಧಿಕಾರಿಗಳು ತನಿಖೆ ನಡೆಸಿದ್ದಾರೆ.

ತನಿಖೆ ನಡೆಸಿದ ಅಧಿಕಾರಿಗಳ ವಿರುದ್ಧ ಆರೋಪಿಸಿ ದೂರುಗಳನ್ನು ನೀಡಿದ್ದಾರೆ. ಬಂದ ದೂರುಗಳ ತನಿಖೆಯನ್ನು ಬೇರೆ ಬೇರೆ ಸಂಸ್ಥೆಗಳು ನಡೆಸುತ್ತಿವೆ. ಆರೋಪಿಗಳು ತನಿಖೆಯ ದಿಕ್ಕು ತಪ್ಪಿಸಲು ಈ ರೀತಿ ಮಾಡಿದ್ದಾರೆ ಎಂದರು.


Spread the love

LEAVE A REPLY

Please enter your comment!
Please enter your name here