ಪಿ.ಎಲ್.ವಿಗಳು ಪಕ್ಷಗಾರರ ಹಿತ ಕಾಯಬೇಕು : ನ್ಯಾ. ಬಸವರಾಜ

0
Training program conducted for PLVs
Spread the love

ವಿಜಯಸಾಕ್ಷಿ ಸುದ್ದಿ, ಗದಗ : ಕಾನೂನು ಸೇವೆಗಳ ಪ್ರಾಧಿಕಾರದ ಧ್ಯೇಯೋದ್ದೇಶಗಳನ್ನು ಕಾರ್ಯರೂಪಕ್ಕೆ ತರುವ ನಿಟ್ಟಿನಲ್ಲಿ ಕಾನೂನು ನೆರವು ಅಭಿರಕ್ಷಕರು, ಪ್ಯಾನೆಲ್ ವಕೀಲರು ಹಾಗೂ ಪ್ರಾಧಿಕಾರಕ್ಕೆ ನೂತನವಾಗಿ ಆಯ್ಕೆಯಾದ ಪಿ.ಎಲ್.ವಿ (ಅರೇಕಾಲಿಕ ಕಾನೂನು ಸ್ವಯಂ ಸೇವಕರು) ಕಾರ್ಯನಿರ್ವಹಿಸಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಬಸವರಾಜ ನುಡಿದರು.

Advertisement

ಅವರು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಗದಗ ಹಾಗೂ ಜಿಲ್ಲಾ ವಕೀಲರ ಸಂಘ ಗದಗ ಇವರ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿರುವ ಎಡಿಆರ್ ಕಟ್ಟಡದಲ್ಲಿ ಪ್ಯಾನೆಲ್ ವಕೀಲರಿಗೆ, ಕಾನೂನು ನೆರವು ಅಭಿರಕ್ಷಕರು ಹಾಗೂ ನೂತನವಾಗಿ ಆಯ್ಕೆಯಾದ ಪಿ.ಎಲ್.ವಿ (ಅರೆಕಾಲಿಕ ಕಾನೂನು ಸ್ವಯಂ ಸೇವಕರು)ಗಳಿಗೆ ಹಮ್ಮಿಕೊಳ್ಳಲಾಗಿದ್ದ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ರಾಷ್ಟçಮಟ್ಟದಿಂದ ಹಿಡಿದು ತಾಲೂಕಾ ಮಟ್ಟದವರೆಗೆ ಕಾನೂನು ಸೇವಾ ಪ್ರಾಧಿಕಾರಗಳು ಕಾರ್ಯನಿರ್ವಹಿಸುತ್ತಿದ್ದು, ಸಮಾಜದಲ್ಲಿರುವ ಪ್ರತಿಯೊಬ್ಬರಿಗೂ ಕಾನೂನಿನ ಅರಿವು-ನೆರವು ನೀಡುವುದು ಪ್ರಾಧಿಕಾರದ ಉದ್ದೇಶವಾಗಿದೆ. ಈ ತರಬೇತಿಯ ಸದುಪಯೋಗ ಪಡೆದು ಪ್ಯಾನಲ್ ವಕೀಲರು ಹಾಗೂ ಕಾನೂನು ನೆರವು ಅಭಿರಕ್ಷಕ ವಕೀಲರು ಈಗಾಗಲೇ ನ್ಯಾಯಾಲಯಗಳಲ್ಲಿ ಚಾಲ್ತಿ ಇದ್ದ ಉಚಿತ ಪ್ರಕರಣಗಳ ಬಗ್ಗೆ ಪಕ್ಷಗಾರರಿಗೆ ಅವರ ಪ್ರರಕರಣಗಳ ಬಗ್ಗೆ ಮಾಹಿತಿ ಹಾಗೂ ಮುದ್ದತ್ ದಿನಾಂಕಗಳ ಬಗ್ಗೆ ಪಕ್ಷಗಾರರಿಗೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ತಪ್ಪದೇ ಮಾಹಿತಿ ನೀಡಿ ಪಕ್ಷಗಾರರ ಹಿತ ಕಾಯಬೇಕು ಎಂದರು.

ಜನರಿಗೆ ಅನುಕೂಲವಾಗಲಿ ಎಂದು ಜಿಲ್ಲಾ ನ್ಯಾಯಾಲಯದ ಸಂಕೀರ್ಣದ ಮುಂಭಾಗದಲ್ಲಿ ಪ್ರತಿದಿನ ಇಬ್ಬರು ವಕೀಲರು ಸಲಹೆ ನೀಡಲು ಲಭ್ಯರಿರುತ್ತಾರೆ. ಕೌಟುಂಬಿಕ ದೌರ್ಜನ್ಯಗಳಿಗೆ ಸಂಬಂಧಪಟ್ಟಂತೆ ಸಿ.ಡಿ.ಪಿ.ಒ. ಕಚೇರಿಯಲ್ಲಿ, ತಹಸೀಲ್ದಾರ ಕಚೇರಿಯಲ್ಲಿ, ಬಾಲ ನ್ಯಾಯಮಂಡಳಿಯಲ್ಲಿ, ಜಿಲ್ಲಾ ಕಾರಾಗೃಹದಲ್ಲಿ, ಎಆರ್‌ಟಿ ಸೆಚಿಟರ್‌ನಲ್ಲಿ, ಜಿಲ್ಲಾ ಆಸ್ಪತ್ರೆಯಲ್ಲಿರುವ ಸಖಿ ಒನ್ ಸ್ಟಾಪ್ ಸೆಂಟರ್‌ನಲ್ಲಿ ನುರಿತ ವಕೀಲರು ಸಲಹೆ ನೀಡಲು ಲಭ್ಯರಿರುವ ಬಗ್ಗೆ ಜನರಿಗೆ ಮಾಹಿತಿ ನೀಡಬೇಕು. ಪಿಎಲ್‌ವಿಗಳು ಯಾವುದೇ ಶುಲ್ಕ, ಸಂಭಾವನೆ ಅಥವಾ ಸಂಬಳವನ್ನು ನಿರೀಕ್ಷಿಸದೇ ತಮ್ಮ ಸುತ್ತ ಮುತ್ತಲಿನ ಪ್ರದೇಶದಲ್ಲಿರುವ ಶೋಷಿತ ಹಾಗೂ ತುಳಿತಕ್ಕೊಳಗಾದ ಜನರ ಸೇವಗಳನ್ನು ಮಾಡಲು ಅರ್ಪಣಾ ಮನೋಭಾದಿಂದ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಅತಿಥಿಗಳಾಗಿ ಪಾಲ್ಗೊಂಡಿದ್ದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಎಸ್. ಶಿವನಗೌಡ್ರ ಮಾತನಾಡಿ, ರಾಜ್ಯ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಹಮ್ಮಿಕೊಳ್ಳಲಾದ ಈ ತರಬೇತಿಯ ಸದುಪಯೋಗ ಪಡೆದು ಪಿಎಲ್‌ವಿಗಳು ತಮ್ಮ ಕಾರ್ಯಕ್ಷೆತ್ರದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಿವಿಧ ಇಲಾಖೆಗಳ, ಎನ್‌ಜಿಒಗಳ ಸಹಯೋಗದಲ್ಲಿ ಮಕ್ಕಳು, ಶ್ರಮಿಕರು, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳಿಗೆ ಸೇರಿದವರಿಗೆ ಮತ್ತು ಕಾನೂನು ಸೇವೆಗಳ ಪ್ರಾಧಿಕಾರಗಳ ಅಧಿನಿಯಮದಡಿಯ ಫಲಾನುಭವಿಗಳಿಗೆ ಸಂಬಂಧಿಸಿದ ಯಾವುದೇ ಸಮಸ್ಯೆಗಳ ಬಗೆಗೆ ನಾಗರಿಕರಲ್ಲಿ ಅರಿವನ್ನು ಮೂಡಿಸಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಂ.ಐ. ಹಿರೇಮನಿಪಾಟೀಲ ಮಾತನಾಡಿ, ನೂತನವಾಗಿ ಆಯ್ಕೆಯಾದ ಪಿಎಲ್‌ವಿಗಳು ಇಂದಿನ ತರಬೇತಿಯಿಂದ ಅಗತ್ಯ ಮಾಹಿತಿ ಪಡೆದು ಸಮಾಜಮುಖಿಯಾಗಿ ಕಾರ್ಯನಿರ್ವಹಿಸಬೇಕು. ತಮ್ಮ ಕ್ಷೇತ್ರದಲ್ಲಿ ಅನ್ಯಾಯಕ್ಕೊಳಗಾದವರ ಪರವಾಗಿ ನ್ಯಾಯ ದೊರಕಿಸುವಲ್ಲಿ ಶ್ರಮಿಸಬೇಕು. ಕಾನೂನು ಸೇವೆಗಳ ಪ್ರಾಧಿಕಾರ ಕಾಯ್ದೆ ಬಗ್ಗೆ ಜನಸಾಮಾನ್ಯರಲ್ಲಿ ಅರಿವು ಮೂಡಿಸಬೇಕು ಎಂದು ಹೇಳಿದರು.

ಸಂಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಂಡಿದ್ದ ಬಾಲನ್ಯಾಯ ಮಂಡಳಿಯ ಸದಸ್ಯರು ಹಾಗೂ ಹಿರಿಯ ವಕೀಲರಾದ ಜಿ.ಸಿ. ರೇಶ್ಮಿ ಅವರು, ಸ್ವಾತಂತ್ರ್ಯಾ ನಂತರ ಭಾರತದಲ್ಲಿ ಅಳವಡಿಸಿಕೊಳ್ಳಲಾಗಿರುವ ಸಂವಿಧಾನ ರಚನೆ ಬಗ್ಗೆ ವಿವರಿಸಿ, ವಿವರವಾದ ಉಪನ್ಯಾಸ ನೀಡಿದರು.

ಪಿಎಲ್‌ವಿ ಪರಶುರಾಮ ಕಳಗಣ್ಣವರ ಪ್ರಾರ್ಥಿಸಿದರು. ಶಿರಸ್ತೆದಾರರಾದ ಬಿ.ಎಂ. ಕುಕನೂರ ಸ್ವಾಗತಿಸಿ, ನಿರೂಪಿಸಿ ವಂದಿಸಿದರು. ಕಾರ್ಯಕ್ರಮದಲ್ಲಿ ಪ್ಯಾನೆಲ್ ವಕೀಲರು, ಕಾನೂನು ನೆರವು ಅಭಿರಕ್ಷಕರು ಹಾಗೂ ನೂತನವಾಗಿ ಆಯ್ಕೆಯಾದ ಪಿ.ಎಲ್.ವಿಗಳು ಪಾಲ್ಗೊಂಡಿದ್ದರು.

ಅರ್ಹ ವ್ಯಕ್ತಿಗಳಿಗೆ ಸರ್ಕಾರದ ಸೌಲಭ್ಯಗಳು ದೊರೆಯದೇ ಇದ್ದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ಮಾಹಿತಿ ನೀಡಿದಲ್ಲಿ ಕ್ರಮವಹಿಸಲಾಗುವುದು. ಒಟ್ಟಿನಲ್ಲಿ ಪ್ಯಾನಲ್ ವಕೀಲರು, ಎಲ್‌ಎಡಿಸಿ ವಕೀಲರು ಹಾಗೂ ಪಿಎಲ್‌ವಿಗಳು ತಮ್ಮ ಜವಾಬ್ದಾರಿಗಳನ್ನು ಅರಿತು ನಿಸ್ವಾರ್ಥ ಮನೋಭಾವದಿಂದ ಕಾರ್ಯನಿರ್ವಹಿಸಬೇಕು ಎಂದು ಸಿ.ಎಸ್. ಶಿವನಗೌಡ್ರ ತಿಳಿಸಿದರು.


Spread the love

LEAVE A REPLY

Please enter your comment!
Please enter your name here