‘ದಿ ಟಾಸ್ಕ್’ಗೆ ಮುಹೂರ್ತದ ಸಂಭ್ರಮ: ಇದು ರಾಘು ಶಿವಮೊಗ್ಗ ನಿರ್ದೇಶನದ ಹೊಸ ಸಿನಿಮಾ

0
Spread the love

ಚೂರಿಕಟ್ಟೆ, ಪೆಂಟಗನ್ ಸಿನಿಮಾಗಳ ಸೂತ್ರಧಾರ ರಾಘು ಶಿವಮೊಗ್ಗ ಹೊಸ ಸಿನಿಮಾ ಕೈಗೆತ್ತಿಕೊಂಡಿದ್ದಾರೆ. ಆ ಚಿತ್ರ ಇಂದು ಸೆಟ್ಟೇರಿದೆ. ಬೆಂಗಳೂರಿನ ಧರ್ಮಗಿರಿ ಮಂಜುನಾಥ ಸ್ವಾಮಿ ದೇಗುಲದಲ್ಲಿಂದು ರಾಘು ನಿರ್ದೇಶನದ ಮೂರನೇ ಸಿನಿಮಾ ದಿ ಟಾಸ್ಕ್ ಮುಹೂರ್ತ ನೆರವೇರಿದೆ. ಡಿವೈಎಸ್ ಪಿ ರಾಜೇಶ್ ದಿ ಟಾಸ್ಕ್ ಗೆ ಕ್ಲ್ಯಾಪ್ ಮಾಡಿದ್ರೆ, ಕೈವಾ ಸಿನಿಮಾದ ಛಾಯಾಗ್ರಾಹಕಿ ಶ್ವೇತ್ ಪ್ರಿಯಾ ಕ್ಯಾಮೆರಾಗೆ ಚಾಲನೆ ಕೊಟ್ಟರು.

Advertisement

ದಿ ಟಾಸ್ಕ್ ಸಿನಿಮಾ ನೈಜ ಘಟನೆಯ ಸ್ಫೂರ್ತಿ ಆಧಾರಿತ ಸಿನಿಮಾ. ಈ ಹಿಂದೆ ರಾಘು ಶಿವಮೊಗ್ಗ ನಿರ್ದೇಶನದ ಪೆಂಟಗನ್ ನಲ್ಲಿ ಹೀರೋ ಆಗಿ ಅಭಿನಯಿಸಿದ್ದ ಸಾಗರ್ ಹಾಗೂ ಭೀಮ ಚಿತ್ರದಲ್ಲಿ ಖಳನಾಯಕನಾಗಿ ಪರಿಚಯರಾಗಿದ್ದ ಜಯಸೂರ್ಯ ನಾಯಕರಾಗಿ ನಟಿಸುತ್ತಿದ್ದಾರೆ. ಉಳಿದಂತೆ ಅಚ್ಯುತ್ ಕುಮಾರ್, ಗೋಪಾಲ್ ಕೃಷ್ಣ ದೇಶಪಾಂಡೇ, ಶ್ರೀಲಕ್ಷ್ಮೀ, ಅರವಿಂದ್ ಕುಪ್ಳಿಕರ್, ಬಿಂಬಶ್ರೀ ನೀನಾಸಂ, ಹರಿಣಿ ಶ್ರೀಕಾಂತ್, ಬಾಲಾಜಿ ಮನೋಹರ್ ಸೇರಿದಂತೆ ನಿರ್ದೇಶಕ ರಾಘು ಶಿವಮೊಗ್ಗ ಕೂಡ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ.

ಲೋಕಪೂಜ್ಯ ಪಿಕ್ಚರ್ ಹೌಸ್ ಸಂಸ್ಥೆಯಡಿ ನಿರ್ಮಾಪಕ ವಿಜಯ್ ಕುಮಾರ್ ಹಾಗೂ ರಾಮಣ್ಣ E ದಿ ಟಾಸ್ಕ್ ಸಿನಿಮಾಗೆ ಬಂಡವಾಳ ಹೂಡುತ್ತಿದ್ದಾರೆ. ಡಿಸೆಂಬರ್ ತಿಂಗಳಲ್ಲಿ ಚಿತ್ರತಂಡ ಶೂಟಿಂಗ್ ಅಖಾಡಕ್ಕೆ ಇಳಿಯಲಿದ್ದು, ಮಡಿಕೇರಿ, ಬೆಂಗಳೂರು ಸುತ್ತಮುತ್ತ ಚಿತ್ರೀಕರಣ ನಡೆಸಲಿದೆ.


Spread the love

LEAVE A REPLY

Please enter your comment!
Please enter your name here