ಬೆಂಗಳೂರು: ಬಿಜೆಪಿ ಅವರು 50 ಕೋಟಿ ಅಫರ್ ನಮ್ಮ ಶಾಸಕರಿಗೆ ಮಾಡ್ತಿರೋದು ನಿಜ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಬಿಜೆಪಿ ಅವರು 50 ಕೋಟಿ ಅಫರ್ ನಮ್ಮ ಶಾಸಕರಿಗೆ ಮಾಡ್ತಿದ್ದಾರೆ. ನಮ್ಮ ಶಾಸಕರ ಜೊತೆ ಬಿಜೆಪಿ ಅವರು ಮಾತಾಡಿದ್ದಾರೆ. ಅದನ್ನ ನಮ್ಮ ಶಾಸಕರು ಸಿಎಂಗೆ ತಿಳಿಸಿದ್ದಾರೆ. ಮಿಕ್ಕಿದ ವಿಚಾರ ನಾನು ಮುಂದೆ ತಿಳಿಸುತ್ತೇನೆ ಎಂದರು.
ಇನ್ನೂ ಪಂಡಿತ್ ಜವಾಹರ್ಲಾಲ್ ನೆಹರೂ ಭಾರತದ ಅಭಿವೃದ್ಧಿಗೆ ಯಾವ ರೀತಿಯ ಅಡಿಪಾಯ ಹಾಕಿದರೆನ್ನುವುದಕ್ಕೆ ಬೆಂಗಳೂರು ಮತ್ತು ಕರ್ನಾಟಕವೇ ಸಾಕ್ಷಿ, ಗುಣಮಟ್ಟದ ಶಿಕ್ಷಣ ಇಲ್ಲಿ ಸಿಗುತ್ತಿದೆ ಅನ್ನೋದನ್ನು ಮನಗಂಡಿದ್ದ ಅವರು ಟಾಟಾ ಇನ್ಸ್ಟಿಟ್ಯೂಟ್, ಹೆಚ್ಎಎಲ್ ಸೇರಿದಂತೆ ಹಲವಾರು ಸಂಸ್ಥೆಗಳನ್ನು ಇಲ್ಲಿ ಸ್ಥಾಪಿಸಿದರು ಎಂದು ಶಿವಕುಮಾರ್ ಹೇಳಿದರು.



