ಶಿಕ್ಷಣ ಇಲಾಖೆ ಮಹಾ ಯಡವಟ್ಟು: ಪ್ರಶ್ನೆ ಪತ್ರಿಕೆ ಸೋರಿಕೆ – ಜೀವಶಾಸ್ತ್ರ ಎಕ್ಸಾಂ ರದ್ದು

0
Spread the love

ಮಂಡ್ಯ: ಪದವಿ ಪೂರ್ವ ಶಿಕ್ಷಣ ಇಲಾಖೆ ಮಹಾ ಯಡವಟ್ಟಿನಿಂದ ಇಂದು ನಡೆಯಬೇಕಿದ್ದ ಪರೀಕ್ಷೆಯನ್ನೆ ಕ್ಯಾನ್ಸಲ್‌ ಮಾಡಿದ್ದಾರೆ. ಹೌದು ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನಲೆ ಜೀವಶಾಸ್ತ್ರ ಎಕ್ಸಾಂ ರದ್ದು ಮಾಡಲಾಗಿದೆ. ಮಂಡ್ಯದ ಕಾರ್ಮೆಲ್ ಶಿಕ್ಷಣ ಸಂಸ್ಥೆಗೆ ಪದವಿ ಪೂರ್ವ ಶಿಕ್ಷಣ ಇಲಾಖೆ ನೋಟಿಸ್ ಜಾರಿ ಮಾಡಿದ್ದು, ಇಂದು ನಡೆಯಬೇಕಿದ್ದ ಜೀವಶಾಸ್ತ್ರ ವಿಷಯದ ಪರೀಕ್ಷೆಯನ್ನು ನವೆಂಬರ್ 19ಕ್ಕೆ ಮುಂದೂಡಲಾಗಿದೆ.

Advertisement

ಈ ಸಂಬಂಧ ಮಂಡ್ಯ ಪದವಿ ಪೂರ್ವ ಶಿಕ್ಷಣ ಇಲಾಖೆ ಪ್ರಭಾರ ಉಪನಿರ್ದೇಶಕ ಜಯಶಂಕರಪ್ಪ ಪ್ರತಿಕ್ರಿಯಿಸಿದ್ದು, ಪ್ರಶ್ನೆ ಪತ್ರಿಕೆ ಲೀಕ್ ಆಗಿರೋದು ತನಿಖೆಯಿಂದ ಬಹಿರಂಗವಾಗಿದೆ. ಹೀಗಾಗಿ ಕಾರ್ಮೆಲ್ ಕಾಲೇಜು ಸಂಸ್ಥೆ ವಿರುದ್ದ ಶಿಸ್ತು ಕ್ರಮಕ್ಕೆ ನೋಟೀಸ್ ಜಾರಿ ಮಾಡಲಾಗಿದೆ ಎಂದು ತಿಳಿಸಿದರು. ನವೆಂಬರ್ 6 ರಿಂದ ನ.16ರ ವರೆಗೆ ಪ್ರಥಮ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ ಇತ್ತು. ಪ್ರಶ್ನೆ ಪತ್ರಿಕೆಯನ್ನ ನೋಡಲ್ ಅಧಿಕಾರಿ ಮೂಲಕ ಹಂಚಿಕೆ ಮಾಡಲಾಗಿದೆ.

ಜೀವಶಾಸ್ತ್ರ ಪರೀಕ್ಷಾ ದಿನಕ್ಕೂ ಮುನ್ನವೇ ಪ್ರಶ್ನೆ ಪತ್ರಿಕೆ ಬಹಿರಂಗವಾಗಿದೆ. ಈ ದಿನ ಜೀವಶಾಸ್ತ್ರ ಪತ್ರಿಕೆ ಎಕ್ಸಾಂ ನಡೆಯಬೇಕಿತ್ತು. ಆದ್ರೆ ಕಾರ್ಮೆಲ್ ವಿದ್ಯಾಸಂಸ್ಥೆಯಲ್ಲಿ ಮೊನ್ನೆಯೇ ಪರೀಕ್ಷೆ ನಡೆಸಲಾಗಿದೆ. ಆದ್ದರಿಂದ ಇಂದು ನಡೆಯಬೇಕಿದ್ದ ಎಕ್ಸಾಂ ಮುಂದೂಡಿದ್ದೇವೆ. ನ.19 ರಂದು ಜೀವಶಾಸ್ತ್ರ ವಿಷಯದ ಪರೀಕ್ಷೆ ನಡೆಸುತ್ತೇವೆ ಎಂದು ಹೇಳಿದ್ದಾರೆ.

 


Spread the love

LEAVE A REPLY

Please enter your comment!
Please enter your name here