ಬೆಳಗಾವಿ:- ಬೆಳಗಾವಿ ಎಸ್‌ಡಿಎ ಆತ್ಮಹತ್ಯೆ ಕೇಸ್ ಗೆ ಸಂಬಧಪಟ್ಟಂತೆ ಸಚಿವೆ ಹೆಬ್ಬಾಳ್ಕರ್ ಪಿಎ ಸೇರಿ ಮೂವರಿಗೆ ಜಾಮೀನು ಮಂಜೂರು ಮಾಡಲಾಗಿದೆ.
Advertisement
ತಹಶೀಲ್ದಾರ್ ಕಚೇರಿಯಲ್ಲೇ ಎಸ್‌ಡಿಎ ರುದ್ರೇಶ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳಿಗೆ ಬೆಳಗಾವಿ 10ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್‌ನಿಂದ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಮಾಡಲಾಗಿದೆ.
ಎ1 ಬಸವರಾಜ ನಾಗರಾಳ, ಎ2 ಅಶೋಕ್ ಕಬ್ಬಲಿಗೇರ್ ಮತ್ತು ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪಿಎ ಎ3 ಸೋಮುಗೆ ಜಾಮೀನು ಸಿಕ್ಕಿದೆ.
ನವೆಂಬರ್ 12ರಂದು ಆರೋಪಿಗಳ ಪರ ವಕೀಲರಿಂದ ಪ್ರತ್ಯೇಕವಾದ ಮಂಡಿಸಿದ್ದರು. ಇದಕ್ಕೆ ಖಡೇಬಜಾರ್ ಠಾಣೆ ಪೊಲೀಸರು ತಕರಾರು ಅರ್ಜಿ ಸಲ್ಲಿಸಿದ್ದರು. ಕಳೆದ 10 ದಿನಗಳಿಂದ ಮೂವರು ಆರೋಪಿಗಳು ತಲೆಮರೆಸಿಕೊಂಡಿದ್ದರು. ಇದೀಗ ಮೂವರು ಆರೋಪಿಗಳಿಗೆ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಮಾಡಲಾಗಿದೆ.