ಗದಗ:- ಇಲ್ಲಿನ ಬಿಂಕದಕಟ್ಟಿಯಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಸ್ಥಳೀಯ ಜನತೆ ಆತಂಕಕ್ಕೀಡಾಗಿದ್ದಾರೆ.
ಗದಗ ತಾಲೂಕಿನ ಬಿಂಕದಕಟ್ಟಿ ಗ್ರಾಮದಲ್ಲಿ ಗುರುವಾರ ರಾತ್ರಿ ಚಿರತೆ ಕಾಣಿಸಿಕೊಂಡಿದ್ದು, ಮನೆಯೊಂದರ ಸಿಸಿಟಿವಿಯಲ್ಲಿ ಚಿರತೆ ಓಡಾಟದ ದೃಶ್ಯ ಸೆರೆಯಾಗಿದೆ. ಇದೀಗ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಅತಿ ಹೆಚ್ಚು ಶೇರ್ ಆಗ್ತಾ ಇದೆ.
ಇದಕ್ಕೂ ಮೊದಲು ನಾಗಾವಿ, ಅಸುಂಡಿ ಗ್ರಾಮಗಳಲ್ಲಿ ಚಿರತೆ ಕಾಣಿಸಿಕೊಂಡಿದ್ದು ಗ್ರಾಮಸ್ಥರು ಭಯಭೀತರಾಗಿದ್ದಾರೆ.
ಸ್ಥಳಕ್ಕೆ ಅರಣ್ಯ ಇಲಾಖೆ, ಪೊಲೀಸ್ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಚಿರತೆಯ ಹೆಜ್ಜೆ ಗುರುತು ಪರಿಶೀಲನೆ ನಡೆಸಿದ್ದಾರೆ.
ಗದಗ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.



