HomeKarnataka Newsಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿ ಮಾಡಲು ಮುಂದಾಗಿದ್ದಾರೆ: ಶಾಸಕ ಯತ್ನಾಳ್‌ ಆರೋಪ

ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿ ಮಾಡಲು ಮುಂದಾಗಿದ್ದಾರೆ: ಶಾಸಕ ಯತ್ನಾಳ್‌ ಆರೋಪ

For Dai;y Updates Join Our whatsapp Group

ಬೆಂಗಳೂರು: ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿ ಮಾಡಲು ಮುಂದಾಗಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಆರೋಪಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ವಕ್ಫ್ ದೊಡ್ಡ ಅನ್ಯಾಯ. ರೈತರು, ಮಠಗಳು ಸೇರಿ ಎಲ್ಲರಿಗೂ ಇದರಿಂದ ಸಮಸ್ಯೆ ಆಗಿದೆ.

ವಕ್ಫ್ ಟ್ರಿಬ್ಯುನಲ್ ರದ್ದಾಗಬೇಕು. ವಕ್ಫ್ ಟ್ರಿಬ್ಯುನಲ್ ಒಂದು ಶಾಪ ಆಗಿದೆ. ಹೀಗಾಗಿ, ನ್ಯಾಯಾಲಯದ ಮೂಲಕವೇ ಎಲ್ಲವೂ ಇತ್ಯರ್ಥ ಆಗಬೇಕು. ಈಗ 2,700 ಎಕರೆ ಜಾಗ ಖಬರ್ ಸ್ತಾನಗೆ ಕೊಡೋಕೆ ಸರ್ಕಾರ, ಕಂದಾಯ ಇಲಾಖೆ ನಿರ್ಣಯ ಮಾಡಿದೆ. ವಕ್ಫ್‌ಗೆ ಎಷ್ಟು ಜಾಗ ತಗೋಬೋದು ಅಂತಾ ಅವರು ಲೀಸ್ಟ್ ಮಾಡಿದ್ದಾರೆ. ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿ ಮಾಡಲು ಮುಂದಾಗಿದ್ದಾರೆ ಎಂದು ಆರೋಪ ಮಾಡಿದ್ದಾರೆ.

ವಕ್ಫ್ ಟ್ರಿಬ್ಯುನಲ್ ರದ್ದು ಆಗಬೇಕು ಅನ್ನೋದು ನಮ್ಮ ಮೊದಲ ಬೇಡಿಕೆ. ಇದು ಆಗಲೇಬೇಕು. ಹೀಗಾಗಿ, ಜನ ಜಾಗೃತಿ ಅಭಿಯಾನ ಮಾಡ್ತಿದ್ದೇವೆ. ನೋಟಿಸ್ ಕೊಟ್ಟು ಕೆಲವು ಈಗ ವಾಪಸ್ ಪಡೆದಿದ್ದಾರೆ.‌ ಆದರೆ‌, ಅನೇಕ ಕಡೆ ನೋಟಿಸ್ ಕೊಡದೇ ದಾಖಲಾತಿ ವಕ್ಫ್ ಮಾಡಿದ್ದಾರೆ. ಬಿಜೆಪಿ ಪಕ್ಷದಿಂದಲೇ ಇದರ ವಿರುದ್ಧ ಹೋರಾಟ ಎಂದು ಸ್ಪಷ್ಟಪಡಿಸಿದರು.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img