ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾದ ನಟ ದರ್ಶನ್ ಆರೋಗ್ಯ ಸಮಸ್ಯೆಯಿಂದಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ, ದರ್ಶನ್ಗೆ ನೀಡಿದ್ದ ಜಾಮೀನನ್ನು ಪ್ರಶ್ನೆ ಮಾಡಲು ಪೊಲೀಸರು ಮುಂದಾಗಿದ್ದು, ಇದಕ್ಕೆ ಸರ್ಕಾರದಿಂದ ಒಪ್ಪಿಗೆ ಕೂಡ ಸಿಕ್ಕಿದೆ.
ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಎ2 ಆರೋಪಿ ಆಗಿದ್ದಾರೆ. ಅವರು ಬೆನ್ನು ನೋವಿನ ಕಾರಣ ಹೇಳಿ ಜಾಮೀನು ಪಡೆದಿದ್ದಾರೆ. ಇದನ್ನು ಸರ್ಕಾರಿ ಪರ ವಕೀಲರು ವಿರೋಧಿಸಿದ್ದರು. ಈಗ ಸುಪ್ರೀಂಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಕೆಗೆ ಪೊಲೀಸರು ಮುಂದಾಗಿದ್ದಾರೆ. ಸುಪ್ರೀಂ ಕೋರ್ಟ್ಗೆ ಸಲ್ಲಿಸಲಿರುವ ಕಡತವನ್ನು ಪೊಲೀಸರು ಗೃಹ ಇಲಾಖೆಗೆ ಕೊಟ್ಟಿದ್ದಾರೆ.
ಆದೇಶ ಪ್ರತಿಯನ್ನು ಗೃಹ ಇಲಾಖೆ ಪರಿಶೀಲಿಸಿದೆ. ಇದಕ್ಕೆ ಅನುಮತಿ ಕೂಡ ನೀಡಿದೆ. ಈಗ ಸರ್ಕಾರ ಒಪ್ಪಿಗೆ ಸೂಚಿಸಿದ್ದು, ಸುಪ್ರೀಂ ಕೋರ್ಟ್ನಲ್ಲಿ ಪೊಲೀಸರು ಹೈಕೋರ್ಟ್ ಆದೇಶವನ್ನು ಪ್ರಶ್ನೆ ಮಾಡಲಿದ್ದಾರೆ. ಇದರಿಂದ ದರ್ಶನ್ಗೆ ಸಂಕಷ್ಟ ಹೆಚ್ಚುವ ಸಾಧ್ಯತೆ ಇದೆ.