ಬೆಂಗಳೂರು:- ರಾಜಧಾನಿ ಬೆಂಗಳೂರಿನ ಚಿಕ್ಕಜಾಲ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ದ್ವಿ ಚಕ್ರ ವಾಹನ ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ.
Advertisement
ಆರೋಪಿಗಳು, ಸಾರ್ವಜನಿಕ ಸ್ಥಳಗಳಲ್ಲಿ ನಿಲ್ಲಿಸಿದ ದ್ವಿಚಕ್ರ ವಾಹನಗಳನ್ನೇ ಟಾರ್ಗೆಟ್ ಮಾಡಿ ಕಳ್ಳತನ ಮಾಡುತ್ತಿದ್ದರು. ಈ ಬಗ್ಗೆ ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ದೂರಿನ ಅನ್ವಯ ತನಿಖೆ ಕೈಗೊಂಡ ಚಿಕ್ಕಜಾಲ ಪೊಲೀಸರು, ಇಬ್ಬರು ಆರೋಪಿಗಳ ಎಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳಿಂದ 14.45 ಮೌಲ್ಯದ 11 ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಲಾಗಿದೆ.
ಆರೋಪಿಗಳ ಬಂಧನದಿಂದ 11 ಪ್ರಕರಣಗಳು 2 ರಾಬರಿ ಪ್ರಕರಣಗಳು ಪತ್ತೆಯಾಗಿದ್ದು, ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.