ನಟ ಡಾಲಿ ಧನಂಜಯ್ ಮನೆಯಲ್ಲಿ ಮದುವೆ ಶಾಸ್ತ್ರ ಪ್ರಾರಂಭವಾಗಿದೆ. ಅರಸಿಕೆರೆ ತಾಲೂಕು ಕಾಳೇನಹಳ್ಳಿಯಲ್ಲಿರುವ ಧನಂಜಯ್ ನಿವಾಸದಲ್ಲಿ ಸರಳವಾಗಿ ನಿಶ್ಚಿತಾರ್ಥ ಕಾರ್ಯಕ್ರಮ ನಡೆಯಿತು. ಮೈಸೂರಿನಲ್ಲಿ ಫೆ.16 ರಂದು ಮದುವೆ ಕಾರ್ಯಕ್ರಮ ನಡೆಯಲಿದೆ.
ಡಾಲಿ ಮತ್ತು ಧನ್ಯತಾ ಇಬ್ಬರು ಅನೇಕ ವರ್ಷಗಳ ಪರಿಚಯ, ಈ ಪರಿಚಯ ಪ್ರೀತಿಗೆ ತಿರುಗಿ ಇದೀಗ ಹಸೆಮಣೆ ಏರುತ್ತಿದ್ದಾರೆ. ಚಿತ್ರದುರ್ಗ ಮೂಲದ ಧನ್ಯತಾ ಅಪ್ಪಟ ಕನ್ನಡತಿ, ಓದಿದ್ದು ಮೈಸೂರಿನಲ್ಲಿ. ಅರಸೀಕೆರೆ ಮೂಲದ ನಟ ಧನಂಜಯ ಓದಿದ್ದು ಕೂಡ ಮೈಸೂರಿನಲ್ಲಿಯೇ ಎನ್ನುವುದು ವಿಶೇಷ.
ಧನ್ಯತಾ ಮಿಡಲ್ ಕ್ಲಾಸ್ ಹುಡುಗಿ ಕಷ್ಟ ಪಟ್ಟು ಡಾಕ್ಟರ್ ಆಗಿದ್ದಾರೆ. ಅಲ್ಲದೆ ಅವರ ವರ್ಕ್ ಎಥಿಕ್ಸ್ ಯೋಚನೆಗಳು ನನಗೆ ಇಷ್ಟ ಆಯ್ತು ಎಂದು ಡಾಲಿ ವಾಹಿನಿಯೊಂದರ ಸಂದರ್ಶನದಲ್ಲಿ ಈ ಹಿಂದೆ ಹೇಳಿದ್ದರು.
ಫೆಬ್ರವರಿ 16ರಂದು ಮೈಸೂರಿನ ಎಕ್ಸಿಬಿಷನ್ ಗ್ರೌಂಡ್‌ನಲ್ಲಿ ಡಾಲಿ ಮತ್ತು ಧನ್ಯತಾ ಮದುವೆ ನಡೆಯಲಿದೆ. ಮೈಸೂರು ಧನಂಜಯ ಮತ್ತು ಧನ್ಯತಾ ಇಬ್ಬರಿಗೂ ಭಾವನಾತ್ಮಕವಾಗಿ ಸಂಬಂಧ ಬೆಸೆದ ಸ್ಥಳ ಹಾಗಾಗಿ ಅಲ್ಲಿಯೇ ಹಸೆಮಣೆ ಏರುವ ನಿರ್ಧಾರ ಮಾಡಿದ್ದಾರೆ.