ವಿಜಯಸಾಕ್ಷಿ ಸುದ್ದಿ, ಗದಗ: ಗದಗ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಜಿಲ್ಲಾಡಳಿತ ಭವನದ ಆವರಣದಲ್ಲಿ ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆಯಡಿಯಲ್ಲಿ ಹೆಣ್ಣು ಭ್ರೂಣ ಹತ್ಯೆ ತಡೆಯಲು ಮತ್ತು ಹೆಣ್ಣು ಮಕ್ಕಳ ಶಿಕ್ಷಣವನ್ನು ಪ್ರೋತ್ಸಾಹಿಸಲು ಜಿಲ್ಲಾ ಮಟ್ಟದಲ್ಲಿ ತೆರೆದ ವಾಹನದ ಮುಖಾಂತರ ಸ್ತಬ್ಧ ಚಿತ್ರದ ಮೂಲಕ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
Advertisement
ಜಾಗೃತಿ ಕಾರ್ಯಕ್ರಮಕ್ಕೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಎಸ್ ಹಾಗೂ ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ ಅವರು ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಪದ್ಮಾವತಿ ಜಿ, ಜಿಲ್ಲಾ ನಿರೂಪಣಾಧಿಕಾರಿಗಳು ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿ ರಾಧಾ ಮಣ್ಣೂರ ಸೇರಿದಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಹಾಜರಿದ್ದರು.