ಹಾಸನ: ನಿಖಿಲ್ ಕುಮಾರಸ್ವಾಮಿ ಗೆಲ್ಲುವುದರಲ್ಲಿ ಯಾವುದೇ ರೀತಿಯ ಅನುಮಾನವಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಹಾಸನದಲ್ಲಿ ಮಾತನಾಡಿದ ಅವರು, ಮುಂದಿನ ಮೂರ್ನಾಲ್ಕು ದಿನದಲ್ಲಿ ಉಪ ಚುನಾವಣೆ ಫಲಿತಾಂಶ ಬರುತ್ತಿದೆ. ನಿಖಿಲ್ ಕುಮಾರಸ್ವಾಮಿ ಅವರು ನೂರಕ್ಕೆ ನೂರು ಗೆದ್ದು ಶಾಸಕರಾಗಿ ಆಯ್ಕೆಯಾಗುವುದರಲ್ಲಿ ಯಾವುದೇ ರೀತಿಯ ಅನುಮಾನವಿಲ್ಲ.
ಭಗವಂತನ ಆಶೀರ್ವಾದ ಸದಾ ನಮ್ಮ ಕುಟುಂಬದ ಮೇಲೆ ಇರುತ್ತದೆ. ಜನಪರ ಕಾರ್ಯಕ್ರಮಗಳನ್ನು ಮಾಡುತ್ತಿದ್ದೇವೆ. ಜನರ ಆಶೀರ್ವಾದ ಮುಂದಿನ ದಿನಗಳಲ್ಲಿ ನಮ್ಮ ಮೇಲೆ ಹೆಚ್ಚು ಇರುತ್ತದೆ. ಇನ್ನು ನಮ್ಮ ಅಜ್ಜಿ ಚೆನ್ನಮ್ಮ ಅವರ ಆರೋಗ್ಯ ಸ್ವಲ್ಪ ಪರ್ವಾಗಿಲ್ಲ. ಅವರು ಎದ್ದು ಓಡಾಡಬೇಕಿದೆ, ಶ್ವಾಸಕೋಶದಲ್ಲಿ ಸೋಂಕಿತ್ತು, ಅದೆಲ್ಲ ಕ್ಲಿಯರ್ ಆಗಿದೆ. ಒಂದು ರೀತಿ ಬೆಟ್ಟರ್ ಆಗಿ ಇದ್ದಾರೆ ಎಂದು ತಿಳಿಸಿದರು.



