ಮಂಡ್ಯ: ಜೆಡಿಎಸ್ ಪ್ರಬಲ ಪ್ರಚಾರ ನಡೆಸಿದ್ರೂ ಕೂಡ ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಗೆಲ್ಲಲಿದೆ ಎಂದು ಸಚಿವ ಚಲುವರಾಯಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ನಡೆದ ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಸರ್ಕಾರದ 5 ಗ್ಯಾರಂಟಿ ಯೋಜನೆಗಳಿಂದ ಜನರು ಸಂತೋಷಗೊಂಡಿದ್ದು, ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಶಳಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಜೆಡಿಎಸ್ ಪ್ರಬಲ ಪ್ರಚಾರ ನಡೆಸಿದರೂ ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಗೆಲ್ಲಲಿದೆ ಎಂದು ಹೇಳಿದರು.
ಇನ್ನೂ ನನಗೆ ಕುಮಾರಸ್ವಾಮಿಯಂತೆ ಮಾಧ್ಯಮದವರ ಮುಂದೆ ನಾಲಗೆ ಹರಿಬಿಡಲು ಸಾಧ್ಯವಿಲ್ಲ. ಅವರು ಚರ್ಚೆಗೆ ಬರುವುದಾದರೆ ಒಂದು ವೇದಿಕೆ ಸಿದ್ಧಮಾಡಿ. ಯಾರು ಹೊಲಸು, ಕಚಡ ಎಂದು ಚರ್ಚೆ ಮಾಡೋಣ. 20 ವರ್ಷ ಅವರ ಜತೆ ಇದ್ದೆವು, ಯಾರು ಸ್ನೇಹ ಬಿಟ್ಟರು ಎಂದು ಚರ್ಚಿಸೋಣ ಎಂದರು.



