ಭಾರತೀಯ ಸಂಸ್ಕೃತಿಯಲ್ಲಿ ಆಯುರ್ವೇದಕ್ಕೆ ಮಹತ್ವದ ಸ್ಥಾನವಿದೆ: ಡಾ. ಐ.ಬಿ. ಕೊಟ್ಟೂರಶೆಟ್ಟಿ

0
Spread the love

ವಿಜಯಸಾಕ್ಷಿ ಸುದ್ದಿ, ರೋಣ: ಭಾರತೀಯ ಸಂಸ್ಕೃತಿಯಲ್ಲಿ ಆಯುರ್ವೇದಕ್ಕೆ ಮಹತ್ವದ ಸ್ಥಾನವಿದೆ. ಆರೋಗ್ಯ ಸುಧಾರಿಸುವಲ್ಲಿ ಆಯುರ್ವೇದ ಸಹ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಆಯುರ್ವೇದಿಕ್ ಮೆಡಿಕಲ್ ಕಾಲೇಜಿನ ಪ್ರಾಂಶುಪಾಲ ಡಾ. ಐ.ಬಿ. ಕೊಟ್ಟೂರಶೆಟ್ಟಿ ಹೇಳಿದರು.

Advertisement

ರೋಣ ನಗರದ ರಾಜೀವ್ ಗಾಂಧಿ ಶಿಕ್ಷಣ ಸಂಸ್ಥೆಯ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ನಡೆದ ಆಯುರ್ವೇದ ದಿನಾಚರಣೆ ಹಾಗೂ ಧನ್ವಂತರಿ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಭಾರತೀಯ ಸಂಸ್ಕೃತಿಯಲ್ಲಿ ಆಯುರ್ವೇದಕ್ಕೆ, ಧನ್ವಂತರಿಗೆ ವಿಶೇಷವಾದ ಸ್ಥಾನವಿದೆ. ಈ ಪುರಾತನ ವೇದ ಗ್ರಂಥಗಳಲ್ಲಿ ವಿಷ್ಣುವಿನ ಅವತಾರವಾದ ಧನ್ವಂತರಿ ದೇವರನ್ನು ಆಯುರ್ವೇದ ಶಾಸ್ತçದ ದೇವರು ಎಂದು ಕರೆಯಲಾಗುತ್ತದೆ. ಸಾಮಾನ್ಯವಾಗಿ ದೇವತೆಗಳ ವೈದ್ಯ ಮತ್ತು ಸಕಲ ಜೀವರಾಶಿಗಳಿಗೆ ಆರೋಗ್ಯದ ವರವನ್ನು ನೀಡುವ ಭಗವಾನ್ ಧನ್ವಂತರಿಯ ಆರಾಧನೆಯನ್ನು ಭಾರತೀಯರು ಇಂದಿಗೂ ಮಾಡುತ್ತಾರೆ ಎಂದು ಮಾಹಿತಿ ನೀಡಿದರು.

ಪ್ರಾಧ್ಯಾಪಕ ಡಾ. ಎಸ್.ಬಿ. ಬನಿ ಮಾತನಾಡಿ, ರೋಗ ಬರದಂತೆ ಮುಂಜಾಗ್ರತೆ ಕೈಗೊಂಡು ಆರೋಗ್ಯ ಕಾಪಾಡಿಕೊಳ್ಳುವುದು ಮುಖ್ಯವಾಗಿದೆ. ನಿತ್ಯ ಜೀವನವನ್ನು ಸುಂದರವಾಗಿ ರೂಪಿಸಿಕೊಳ್ಳಬೇಕಾದರೆ ಆರೋಗ್ಯ ಬಹಳ ಮುಖ್ಯವಾಗಿದೆ. ಪ್ರಾಕೃತಿಕವಾಗಿ ಸಿಗುವ ಆಯುರ್ವೇದ ಚಿಕಿತ್ಸೆಗೆ ಮಹತ್ವ ನೀಡಬೇಕಿದೆ ಎಂದರು.

ಪ್ರಾಧ್ಯಾಪಕ ಡಾ. ಪಿ.ಬಿ. ತುರ್ಬೇನ್ ಮಾತನಾಡಿ, ಆಯುರ್ವೇದದ ಚಿಕಿತ್ಸಾ ವ್ಯವಸ್ಥೆಯು ಆರೋಗ್ಯಕ್ಕೆ ಅನುಗುಣವಾದ ಉತ್ತಮ ಆರೋಗ್ಯ ಸಂಪತ್ತನ್ನು ನೀಡುತ್ತದೆ. ಆಯುರ್ವೇದವು ಆರೋಗ್ಯ ಮತ್ತು ಕ್ಷೇಮವು ಮನಸ್ಸು, ದೇಹ, ಚೈತನ್ಯ ಮತ್ತು ಪರಿಸರದ ನಡುವಿನ ಸೂಕ್ಷ್ಮ ಸಮತೋಲನವನ್ನು ಅವಲಂಬಿಸಿರುತ್ತದೆ ಎಂಬ ನಂಬಿಕೆಯನ್ನು ಆಧರಿಸಿದೆ. ಆಯುರ್ವೇದ ಔಷಧದ ಮುಖ್ಯ ಗುರಿಯು ಉತ್ತಮ ಆರೋಗ್ಯವನ್ನು ಉತ್ತೇಜಿಸುವುದಾಗಿದೆ ಎಂದರು.

ಈ ವೇಳೆ ನರೇಗಲ್ ಪಟ್ಟಣದ ಸಂಜೀವಿನಿ ಕ್ಲಿನಿಕ್ ಆರಂಭಿಸಿ ಹಾಗೂ ರಾಜೀವ್ ಗಾಂಧಿ ಶಿಕ್ಷಣ ಸಂಸ್ಥೆಯ ಆಯುರ್ವೇದ ವೈದ್ಯಕೀಯ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ ವೃತ್ತಿ ಜೀವನ ಆರಂಭಿಸಿ ೨೫ ವರ್ಷಗಳನ್ನು ಪೂರೈಸಿ ಈಗಲೂ ಸೇವೆಯಲ್ಲಿ ನಿರತರಾಗಿರುವ ವೈದ್ಯ ಡಾ. ಶಿವಯ್ಯ ಎ.ರೋಣದ ಅವರನ್ನು ಗೌರವಿಸಿ ಸನ್ಮಾನಿಸಲಾಯಿತು.

ಡಾ. ಎಂ.ಎA. ಕಟ್ಟಿಮನಿ, ಡಾ. ಜಿ.ಐ. ಹಿರೇಮಠ, ಎಸ್.ಎನ್. ಕುಷ್ಟಗಿ, ಡಾ. ಎಸ್.ಐ. ಬಾರಕೇರ, ಡಾ. ಬಿ.ವಿ. ಪೊಲೀಸ್‌ಪಾಟೀಲ, ದ್ರವ್ಯಗುಣ ವಿಜ್ಞಾನದ ಮುಖ್ಯಸ್ಥರಾದ ಡಾ. ಶಿವಯ್ಯ ಎ.ರೋಣದ, ಡಾ. ವಿನೋದ, ಡಾ. ನಾಗರಾಜ, ಡಾ. ಚಪ್ಪನಮಠ, ಡಾ. ರಾಕೇಶ ಇದ್ದರು. ಡಾ. ಎಸ್.ಎಸ್. ಬನಿ ನಿರೂಪಿಸಿದರು, ಡಾ. ಆನಂದ ಎಚ್.ಕೇರಿಯವರ ವಂದಿಸಿದರು.


 


Spread the love

LEAVE A REPLY

Please enter your comment!
Please enter your name here