ಅಮರಾವತಿ:- ತಿರುಮಲಕ್ಕೆ ಹೋಗುವ ಭಕ್ತರಿಗೆ ಟಿಟಿಡಿ ಸಿಹಿ ಸುದ್ದಿ ಕೊಟ್ಟಿದೆ. ಏನಿದು ಅಂತ ಯೋಚನೆ ಮಾಡುತ್ತಿದ್ದೀರಾ? ನೀವು ಇದನ್ನು ಖಚಿತವಾಗಿ ತಿಳಿದಿರಬೇಕು. ಇದರಿಂದ ಅನೇಕ ಜನರು ನಿರಾಳರಾಗುತ್ತಾರೆ ಎಂದು ನಿರೀಕ್ಷಿಸಬಹುದು.
ಎಸ್, ಇನ್ಮುಂದೆ ಎರಡರಿಂದ ಮೂರು ಗಂಟೆಯಲ್ಲೇ ತಿರುಪತಿ ತಿಮ್ಮಪ್ಪನ ದರ್ಶನ ಸಿಗಲಿದ್ದು, ಈ ಮೂಲಕ ತಿಮ್ಮಪ್ಪನ ಭಕ್ತರಿಗೆ ಟಿಟಿಡಿ ಗುಡ್ ನ್ಯೂಸ್ ನೀಡಿದೆ.
ಕೇವಲ 2ರಿಂದ 3 ಗಂಟೆಯೊಳಗೆ ಸಾಮಾನ್ಯ ಭಕ್ತರು ದೇವರ ದರ್ಶನ ಪಡೆಯುವಂತೆ ಬದಲಾವಣೆ ತರಲು ಎಐ ಮತ್ತು ಆಧುನಿಕ ತಂತ್ರಜ್ಞಾನ ಬಳಸಲು ಕ್ರಮಕೈಗೊಳ್ಳಲಾಗಿದೆ. ಕಂಪಾರ್ಟ್‌ಮೆಂಟ್‌ಗಳಲ್ಲಿ ಭಕ್ತರಿಗೆ ತೊಂದರೆ, ಕಿರಿಕಿರಿ ಉಂಟಾಗದಂತೆ ದರ್ಶನ ಲಭ್ಯವಾಗಲು ಈ ಯೋಜನೆ ರೂಪಿಸಲಾಗಿದೆ.
ಟಿಟಿಡಿ ಆಡಳಿತ ಮಂಡಳಿ ಹಲವು ನಿರ್ಧಾರಗಳನ್ನು ತೆಗೆದುಕೊಂಡಿದ್ದು, ಶ್ರೀವಾಣಿ ಟ್ರಸ್ಟ್ ಅನ್ನು ವಜಾಗೊಳಿಸಿದೆ. ಟಿಟಿಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅನ್ಯಧರ್ಮೀಯ ನೌಕರರನ್ನು ವಿಆರ್‌ಎಸ್ ಅಥವಾ ಸರ್ಕಾರಿ ಇಲಾಖೆಗಳಿಗೆ ವರ್ಗಾಯಿಸಲು ನಿರ್ಧರಿಸಲಾಗಿದೆ. ಈ ಕುರಿತು ಟಿಟಿಡಿ ಅಧ್ಯಕ್ಷ ಬಿಆರ್ ನಾಯ್ಡು ಸ್ಪಷ್ಟಪಡಿಸಿದ್ದಾರೆ.