ವಕ್ಫ್ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ರೈತ ಬಾಂಧವರ ನೇತೃತ್ವದಲ್ಲಿ ಬೃಹತ್ ಹೋರಾಟ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ವಕ್ಫ್ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ನ. ೨೨ರ ಬೆಳಿಗ್ಗೆ ೧೦ ಗಂಟೆಯಿAದ ಸಂಜೆ ೬ ಗಂಟೆಯವರೆಗೆ ನಗರದ ಗಾಂಧಿ ವೃತ್ತದಲ್ಲಿ ಮಾಜಿ ಸಚಿವರು, ಹಾಲಿ ಶಾಸಕ ಸಿ.ಸಿ. ಪಾಟೀಲ, ಡಾ. ಚಂದ್ರು ಲಮಾಣಿ, ಮಾಜಿ ಶಾಸಕರಾದ ಕಳಕಪ್ಪ ಬಂಡಿ, ಜಿಲ್ಲಾಧ್ಯಕ್ಷ ತೋಟಪ್ಪ(ರಾಜು) ಕುರುಡಗಿ, ವಿ.ಪ ಸದಸ್ಯ ಎಸ್.ವ್ಹಿ. ಸಂಕನೂರ ಸ್ಭೆರಿದಂತೆ ಪಕ್ಷದ ಎಲ್ಲ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಗದಗ ಜಿಲ್ಲೆಯ ಸಮಸ್ತ ರೈತ ಬಾಂಧವರ ನೇತೃತ್ವದಲ್ಲಿ ಹೋರಾಟ ನಡೆಸಿ, ಅಹವಾಲು ಸ್ವೀಕರಿಸಲಾಗುವುದು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ತೋಟಪ್ಪ(ರಾಜು) ಕುರುಡಗಿ ತಿಳಿಸಿದ್ದಾರೆ.

Advertisement

ಈ ಬಗ್ಗೆ ಪಕ್ಷದ ಕಚೇರಿಯಲ್ಲಿ ಮಾಹಿತಿ ನೀಡಿದ ಅವರು, ಶೋಷಣೆಗೊಳಗಾದ ಸಹಸ್ರಾರು ಸಂಖ್ಯೆಯ ಸಾರ್ವಜನಿಕರು, ರೈತರು, ಮಠ-ಮಂದಿರಗಳು, ಶಾಲೆಗಳ ಹಾಗೂ ಸಾರ್ವಜನಿಕ ಆಸ್ತಿಗಳ ಕುರಿತು ಅಹವಾಲು ಸ್ವೀಕರಿಸಲಾಗುವುದು. ಸಮಸ್ಯೆಯ ಗಂಭೀರತೆಯನ್ನು ಜಿಲ್ಲೆಯ ಎಲ್ಲ ತಾಲೂಕುವಾರು ಪರಾಮರ್ಶೆ ಮಾಡುತ್ತೇವೆ. 3 ತಂಡಗಳನ್ನು ರಾಜ್ಯಾಧ್ಯಕ್ಷರು ಈಗಾಗಲೇ ಪ್ರಕಟಿಸಿದ್ದು, ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ನೇತೃತ್ವದ ಒಂದು ತಂಡ, ವಿಪಕ್ಷ ನಾಯಕರಾದ ಆರ್.ಅಶೋಕ್, ಚಲವಾದಿ ನಾರಾಯಣಸ್ವಾಮಿ ಅವರ ನೇತೃತ್ವದಲ್ಲಿ ತಂಡಗಳು ಕಾರ್ಯನಿರ್ವಹಿಸುತ್ತವೆ. ಈ ಮೂರು ತಂಡಗಳು ಡಿಸೆಂಬರ್ ಮೊದಲ ವಾರದಿಂದ ರಾಜ್ಯಾದ್ಯಂತ ಪ್ರತಿ ಜಿಲ್ಲೆಗಳಲ್ಲಿ ಪ್ರವಾಸ ಮಾಡಲಿವೆ. ಈ ಸಮಸ್ಯೆಯನ್ನು ಮುಂಬರುವ ಬೆಳಗಾವಿ ಅಧಿವೇಶನದಲ್ಲಿ ಪ್ರಸ್ತಾಪಿಸುತ್ತೇವೆ ಎಂದರು.

ಕಾನೂನಾತ್ಮಕ ಹೋರಾಟಕ್ಕೆ ಶಕ್ತಿ ತುಂಬುವ ಸಲುವಾಗಿ ಈ ತಂಡ ರಚಿಸಲಾಗಿದೆ. ನೋಟಿಸ್ ಹಿಂಪಡೆಯುವಂತೆ ಮುಖ್ಯಮಂತ್ರಿಗಳು ಹೇಳಿದ್ದು ಕೇವಲ ಮಹಾರಾಷ್ಟ ಮತ್ತು ಜಾರ್ಖಂಡ್ ಚುನಾವಣೆಯ ಕಣ್ಣೋರೆಸುವ ತಂತ್ರವೇ?  ರೈತರ ಕುರಿತು ಕಾಂಗ್ರೇಸ್ಸಿನದು ಮೊಸಳೆ ಕಣ್ಣೀರಲ್ಲವೇ? 1974 ವಕ್ಫ್ ಆಸ್ತಿ ಕುರಿತು ಗಜೇಟ್ ಅನ್ನು ಹಿಂಪಡೆಯಲು ರಾಜ್ಯದ ಕಾಂಗ್ರೇಸ್ ಸರ್ಕಾರ ಬದ್ಧತೆಯನ್ನು ಪ್ರದರ್ಶಿಸುವುದೇ? ಮುಖ್ಯಮಂತ್ರಿಗಳೇ ಉತ್ತರಿಸಬೇಕು ಎಂದು ತೋಟಪ್ಪ(ರಾಜು) ಕುರುಡಗಿ ಹೇಳಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಲಿಂಗರಾಜ ಪಾಟೀಲ, ಫಕ್ಕೀರೇಶ ರಟ್ಟಿಹಳ್ಳಿ, ಪ್ರಮುಖರಾದ ಅಶೋಕ ಸಂಕಣ್ಣವರ, ರಮೇಶ ಸಜ್ಜಗಾರ, ಸುರೇಶ ಮರಳಪ್ಪನವರ ಉಪಸ್ಥಿತರಿದ್ದರು.


Spread the love

LEAVE A REPLY

Please enter your comment!
Please enter your name here