ಬೆಂಗಳೂರು: ರಾಷ್ಟ್ರ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದ್ದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಕೇಸ್ ಗೆ ಸಂಬಂಧಿಸಿದಂತೆ ಜಿಲ್ಲಾ ಪಂಚಾಯಿತಿ ಸದಸ್ಯೆ ಅತ್ಯಾಚಾರ ಪ್ರಕರಣದಲ್ಲಿ ಆರೋಪಿ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
Advertisement
ಜಿಪಂ ಸದಸ್ಯೆ ಅತ್ಯಾಚಾರ ಪ್ರಕರಣದಲ್ಲಿ ಆರೋಪಿ ಪ್ರಜ್ವಲ್‌ನನ್ನು ಬಂಧಿಸಿರಲಿಲ್ಲ. ಬಂಧನ ಮಾಡದೇ ಎಸ್‌ಐಟಿ ದೋಷಾರೋಪಪಟ್ಟಿ ಸಲ್ಲಿಕೆ ಮಾಡಿತ್ತು. ಪ್ರಕರಣ ಸಂಬಂಧ ಪ್ರಜ್ವಲ್ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಪ್ರಜ್ವಲ್ ರೇವಣ್ಣ ವಿರುದ್ಧ 4ನೇ ಪ್ರಕರಣ ವಿಚಾರಣೆ ನಡೆಸಿದ ಹೈಕೋರ್ಟ್ ಜಾಮೀನು ಅರ್ಜಿಯನ್ನು ಸಹ ವಜಾಗೊಳಿಸಿ ಆದೇಶ ಹೊರಡಿಸಿದೆ.