ವಿಜಯಪುರ: ತಲೆ ಮೇಲೆ ಕಲ್ಲು ಎತ್ತಿಹಾಕಿ ವ್ಯಕ್ತಿಯನ್ನು ಬರ್ಬರವಾಗಿ ಕೊಂದಿರುವ ಘಟನೆ ವಿಜಯಪುರ ಜಿಲ್ಲೆ ಸಿಂದಗಿ ಪಟ್ಟಣದ ಸರ್ಕಾರಿ ಶಾಲೆ ಆವರಣದಲ್ಲಿ ನಡೆದಿದೆ. ಸಿಂದಗಿ ತಾ. ಮಲಘಾಣ ಗ್ರಾಮದ ನಿವಾಸಿ ಶರಣಪ್ಪ ಕಕ್ಕಳಮೇಲಿ (45) ಕೊಲೆಯಾದ ವ್ಯಕ್ತಿಯಾಗಿದ್ದು,
ತಡರಾತ್ರಿ ತಲೆ ಮೇಲೆ ಕಲ್ಲು ಹಾಕಿ ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ. ಕುಡಿದ ನಶೆಯಲ್ಲಿ ಹಂತಕರು ಕೊಲೆ ಮಾಡಿರುವ ಶಂಕೆಯಾಗಿದ್ದು, ಸ್ಥಳಕ್ಕೆ ಸಿಂದಗಿ ಪಿಎಸ್ಐ ಆರೀಪ್ ಮುಶಾಪುರಿ ಭೇಟಿ, ಪರಿಶೀಲನೆ ನಡೆಸಿದ್ದಾರೆ. ಇನ್ನೂ ಘಟನೆ ಸಂಬಂಧ ಸಿಂದಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿ ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.



