ರಾಮನಗರ: ಚನ್ನಪಟ್ಟಣದಲ್ಲಿ ಎನ್ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಜೆಡಿಎಸ್ನ ನಿಖಿಲ್ ಕುಮಾರಸ್ವಾಮಿ ಅವರನ್ನು ಮಣಿಸಿ ಕಾಂಗ್ರೆಸ್ನ ಸಿಪಿ ಯೋಗೇಶ್ವರ್ ಗೆಲುವು ದಾಖಲಿಸಿದ್ದಾರೆ. ಅದರೊಂದಿಗೆ, ಕೊನೇ ಕ್ಷಣದಲ್ಲಿ ಬಿಜೆಪಿಯಿಂದ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿ ಸ್ಪರ್ಧಿಸಿದ್ದ ಯೋಗೇಶ್ವರ್ ಅವರನ್ನು ಮತದಾರರು ‘ಕೈ’ ಹಿಡಿದಿದ್ದಾರೆ.
ಅತ್ತ ನಿಖಿಲ್ಗೆ ಮೂರನೇ ಬಾರಿಯೂ ಮುಖಭಂಗವಾಗಿದೆ. ಆದ್ದರಿಂದ ನಿಖಿಲ್ ಕುಮಾರಸ್ವಾಮಿ ಕಂಡಿದ್ದಾರೆಂದು ಅವರ ಅಭಿಮಾನಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಚನ್ನಪಟ್ಟಣದ ಕೂಡ್ಲೂರು ಬಳಿಯ ಶ್ರೀರಾಂಪುರ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಮಂಜುನಾಥ್ ಆತ್ಮಹತ್ಯೆಗೆ ಯತ್ನಿಸಿರುವ ವ್ಯಕ್ತಿಯಾಗಿದ್ದು, ನಾನು ನಿಖಿಲ್ ಅಭಿಮಾನಿ. ನನ್ನ ಸಾವಿಗೆ ನಾನೇ ಕಾರಣ. ಜೈ ಜೆಡಿಎಸ್ ಎಂದು ಪತ್ರ ಪರೆದಿಟ್ಟು ವಿಷ ಸೇವಿಸಿದ್ದಾನೆ. ಈತನನ್ನು ಮಂಡ್ಯದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸಧ್ಯಕ್ಕೆ ಪ್ರಾಣಪಾಯದಿಂದ ಪರಾಗಿದ್ದಾನೆ. ಉಪಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಅವರು ಸೋಲು ಕಂಡಿದ್ದಾರೆ. ಅವರ ಸೋಲಿನಿಂದ ಕಂಗಾಲಾಗಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎನ್ನಲಾಗಿದೆ.