ಬುಡಕಟ್ಟುಗಳ ನಡುವೆ ನಡೆದ ಘರ್ಷಣೆಯಲ್ಲಿ 37 ಮಂದಿ ಮೃತಪಟ್ಟಿದ್ದು 30ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಪಾಕಿಸ್ತಾನದ ಖೈಬರ್ ಪಖ್ತೂಂಕ್ವಾ ಪ್ರಾಂತದಲ್ಲಿ ನಡೆದಿದೆ.
ಬಳಿಕ ಕುರ್ರಮ್ ಜಿಲ್ಲೆಯಲ್ಲಿ ಅಲಿಜೈ ಮತ್ತು ಬಗಾನ್ ಬುಡಕಟ್ಟುಗಳ ನಡುವೆ ಜನಾಂಗೀಯ ಹಿಂಸೆ ಭುಗಿಲೆದ್ದಿದೆ. ಈ ವೇಳೆ ವಾಯವ್ಯ ಪಾಕಿಸ್ತಾನದ ಖೈಬರ್ ಪಖ್ತೂಂಕ್ವಾದ ಪರಾಚಿನಾರ್ ನಗರದಲ್ಲಿ ಹಲವು ವಾಹನಗಳ ಮೇಲೆ ಗುಂಡಿನ ದಾಳಿ ನಡೆದಿದ್ದು 47 ಮಂದಿ ಸಾವನ್ನಪ್ಪಿದ್ದರು.
ಘಟನೆಯಲ್ಲಿ ಹಲವಾರು ಮನೆಗಳು ಮತ್ತು ಅಂಗಡಿಗಳಿಗೆ ಬೆಂಕಿ ಹಚ್ಚಲಾಗಿದ್ದು ಸ್ಥಳೀಯರು ಸುರಕ್ಷಿತ ಪ್ರದೇಶಕ್ಕೆ ಪಲಾಯನ ಮಾಡಿದ್ದಾರೆ ಪರಿಸ್ಥಿತಿಯನ್ನು ನಿಯಂತ್ರಿಸಲು ಖೈಬರ್ ಪಖ್ತೂಂಕ್ವಾದ ಕಾನೂನು ಸಚಿವ, ಸರಕಾರದ ಮುಖ್ಯ ಕಾರ್ಯದರ್ಶಿ ಐಜಿಪಿ ಹಾಗೂ ಪೊಲೀಸರನ್ನು ಹೆಲಿಕಾಪ್ಟರ್ ಮೂಲಕ ಸ್ಥಳಕ್ಕೆ ರವಾನಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.



