ಬಿಗ್ಬಾಸ್ ಮನೆಯಿಂದ ಈ ವಾರ ಧರ್ಮ ಕೀರ್ತಿರಾಜ್ ಅವರು ಎಲಿಮಿನೇಟ್ ಆಗಿದ್ದಾರೆ. ಈ ವಾರ ಬಿಗ್ಬಾಸ್ ಮನೆಯಿಂದ ಆಚೆ ಹೋಗಲು 7 ಮಂದಿ ನಾಮಿನೇಟ್ ಆಗಿದ್ದರು. ಕೊನೆಯ ಕ್ಷಣದಲ್ಲಿ ಚೈತ್ರಾ ಕುಂದಾಪುರ ಹಾಗೂ ಧರ್ಮ ಕೀರ್ತಿರಾಜ್ ಮಾತ್ರ ಉಳಿದುಕೊಂಡಿದ್ದರು.
ಇದಾದ ಬಳಿಕ ಕಿಚ್ಚ ಸುದೀಪ್ ಮನೆಯಿಂದ ಆಚೆ ಬರೋ ಸ್ಪರ್ಧಿ ಎಂದು ಧರ್ಮ ಕೀರ್ತಿರಾಜ್ ಅವರ ಹೆಸರು ಹೇಳಿದ್ದರು. ಧರ್ಮ ಕೀರ್ತಿರಾಜ್ ಅವರ ಹೆಸರನ್ನು ಹೇಳುತ್ತಿದ್ದಂತೆ ಎಲ್ಲಾ ಸ್ಪರ್ಧಿ ಬೇಸರಗೊಂಡರು. ಅಲ್ಲದೇ ಐಶ್ವರ್ಯ, ತ್ರಿವಿಕ್ರಮ್, ಭವ್ಯಾ ಗೌಡ ಕಣ್ಣೀರು ಹಾಕಿದ್ದಾರೆ.
ಇನ್ನೂ ನವಗ್ರಹ ಸಿನಿಮಾ ಮೂಲಕ ಖ್ಯಾತಿ ಪಡೆದ ಹಿರಿಯ ನಟ ಕೀರ್ತಿ ರಾಜ್ ಅವರ ಮಗ ಧರ್ಮ ಕೀರ್ತಿರಾಜ್ ಬಿಗ್ ಬಾಸ್ ಮನೆಗೆ ಎಂಟ್ರಿ ಕೊಟ್ಟಾಗ ಬೆಟ್ಟದಷ್ಟು ನಿರೀಕ್ಷೆಗಳು ಮೂಡಿದ್ದವು. ಆದರೆ ಧರ್ಮ ಅವರು ತಾಳ್ಮೆಯಿಂದ ಇದ್ದದ್ದೇ ಅವರಿಗೆ ಮುಳುವಾಗಿದೆ ಅಂತಿದ್ದಾರೆ ಪ್ರೇಕ್ಷಕರು.



