ವಿಜಯಸಾಕ್ಷಿ ಸುದ್ದಿ, ರಾಯಭಾಗ
ದೇವಸ್ಥಾನದಲ್ಲಿನ ನಿರ್ಬಂಧ ಮರಳಿ ತೆಗೆದುಕೊಳ್ಳಿ, ಇಲ್ಲವಾದರೆ ಉಗ್ರ ಪ್ರತಿಭಟನೆ ಎದುರಿಸಬೇಕಾಗುತ್ತದೆ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ರಾಜ್ಯ ಸರ್ಕಾರದ ವಿರುದ್ಧ ಕಿಡಿ ಕಾರಿದರು.
ಬೆಳಗಾವಿ ಜಿಲ್ಲೆಯ ರಾಯಬಾಗ ತಾಲ್ಲೂಕಿನ ಚಿಂಚಲಿ ಗ್ರಾಮದಲ್ಲಿ ಮುತಾಲಿಕ್ ಮಾತನಾಡಿ, ಮಸೀದಿ, ಚರ್ಚ್‌ಗಳಿಗಿಲ್ಲದ ನಿರ್ಬಂಧ ದೇವಸ್ಥಾನಗಳಿಗೇಕೆ ಎಂದು ಪ್ರಶ್ನಿಸಿದರು.
ಚಿಂಚಲಿಯ ಪ್ರಸಿದ್ಧ ಮಾಯಕ್ಕದೇವಿ ದೇವಸ್ಥಾನದಲ್ಲಿ ಕರ್ನಾಟಕ, ಮಹಾರಾಷ್ಟ್ರ, ಗೋವಾ ರಾಜ್ಯದಿಂದ ಬರುವ ಭಕ್ತರಿಗೆ ಅವಕಾಶ ನೀಡಬೇಕು. ತಕ್ಷಣ ದೇವಸ್ಥಾನದ ಮೇಲಿನ ನಿರ್ಬಂಧ ರದ್ದುಗೊಳಿಸಬೇಕು ಎಂದು ಒತ್ತಾಯಿಸಿದರು.
ಮಸೀದಿಗಳಲ್ಲಿ ನಮಾಜ್, ಚರ್ಚಗಳಲ್ಲಿ ಪ್ರಾರ್ಥನೆ ನಡೆಯುತ್ತಿದೆ.
ಆದರೆ, ದೇವಸ್ಥಾನಗಳಿಗೆ ಏಕೆ ತೊಂದರೆ ನೀಡುತ್ತಿದ್ದೀರಿ. ಬಾರ್, ಹೋಟೆಲ್, ಸಂತೆಗಳೆಲ್ಲವೂ ಓಪನ್ ಇವೆ. ಎಲ್ಲವನ್ನೂ ಬಂದ್‌ಗೊಳಿಸಿ ಲಾಕ್‌ಡೌನ್ ಮಾಡಿ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಆಗ್ರಹಿಸಿದರು.