ವಿಜಯನಗರ: ಈ ಹಿಂದೆ ನಮ್ಮ ಕ್ಷೇತ್ರಕ್ಕೆ ಸರ್ಕಾರದಿಂದ ಯಾವುದೇ ಅನುದಾನ ಬರುತ್ತಿಲ್ಲ ಎಂದು ಹೇಳಿದ್ದ ಶಾಸಕ ಗವಿಯಪ್ಪ ಮತ್ತೆ ಗ್ಯಾರಂಟಿಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹೊಸಪೇಟೆಯ ಇಪ್ಪಿತೇರಿ ಮಾಗಾಣಿಯಲ್ಲಿ ಭೂಮಿ ಪೂಜೆ ನಡೆಸಿ, ಮಾತನಾಡಿದ ಅವರು,ಬಸ್ ನಲ್ಲಿ ಓಡ್ಯಾಡೋದು ಸೇರಿದಂತೆ ಇನ್ನೆರಡು ಗ್ಯಾರಂಟಿಗಳು ಕಡಿಮೆ ಮಾಡೋಕೆ ಸಿಎಂಗೆ ಹೇಳ್ತಿವಿ ಎಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ.
Advertisement
ಗ್ಯಾರಂಟಿಗಳಿಂದ ಆಶ್ರಯ ಮನೆಗಳು ಬರುತ್ತಿಲ್ಲ. ಶಕ್ತಿ ಯೋಜನೆ ಸೇರಿದಂತೆ ಇನ್ನೆರೆಡು ಗ್ಯಾರಂಟಿಗಳು ಕಡಿಮೆ ಮಾಡಲು ಮುಖ್ಯಮಂತ್ರಿಗಳಿಗೆ ಹೇಳುತ್ತೇವೆ. ಅವರೇನು ತೀರ್ಮಾನ ಮಾಡುತ್ತಾರೆ ನೋಡೋಣ ಎಂದು ಹೇಳಿದರು. ಸಿದ್ದರಾಮಯ್ಯನವರ ಸರ್ಕಾರದ ಖಜಾನೆ ಖಾಲಿಯಾಗಿದೆ ಎನ್ನುವ ವಿಪಕ್ಷಗಳ ಆರೋಪಕ್ಕೆ ಕಾಂಗ್ರೆಸ್ ಪಕ್ಷದ ಶಾಸಕರ ಈ ಹೇಳಿಕೆಗಳು ಸಾಕಷ್ಟು ಚರ್ಚೆಗೆ ಕಾರಣವಾಗಿದೆ.