ಬೆಂಗಳೂರು: ಟ್ರೈನ್ ನಲ್ಲಿ ಗಾಂಜಾ ತರಿಸಿ ಮಾರಾಟ ಮಾಡುತ್ತಿದ್ದ ಪೆಡ್ಲರ್ ಅನ್ನು ಮಾರತಹಳ್ಳಿ ಪೊಲೀಸರು ಬಂದಿಸಿದ್ದಾರೆ. ಅಬುಲ್ ಪಾಷಾ(34) ಬಂಧಿತ ಆರೋಪಿಯಾಗಿದ್ದು, ಆಟೋ ಡ್ರೈವರ್ ಅಗಿದ್ದ ಅಬುಲ್ ಪಾಷಾ 5 ವರ್ಷದಿಂದ ಬೆಂಗಳೂರಲ್ಲಿ ವಾಸವಾಗಿದ್ದನು.
Advertisement
ಲೇಬರ್ ಶೆಡ್ ನಲ್ಲಿ ಪ್ಯಾಕೇಟ್ ಮಾಡಿ ಗಾಂಜಾ ಮಾರಾಟ ಮಾಡುತ್ತಿದ್ದನು. ಖಚಿತ ಮಾಹಿತಿ ಮೇರೆಗೆ ಪೊಲೀಸರು ಆರೋಪಿಯನ್ನು ಅರೆಸ್ಟ್ ಮಾಡಿದ್ದು, ಬಂಧಿತನಿಂದ 7.5 ಲಕ್ಷ ಮೌಲ್ಯದ 10 ಕೆ.ಜಿ ಗಾಂಜಾ ವಶಕ್ಕೆ ಪಡೆದು, ಮಾರತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ.