ಬೆಂಗಳೂರು: ವಿದ್ಯಾರ್ಥಿಗಳು, ಸ್ಥಳೀಯರನ್ನು ಟಾರ್ಗೆಟ್ ಮಾಡಿ ಗಾಂಜಾ ಮಾರುತ್ತಿದ್ದ ಆರೋಪಿಯನ್ನು ಸಂಪಿಗೆಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪಶ್ಚಿಮ ಬಂಗಾಳದಿಂದ ಕಡಿಮೆ ಬೆಲೆಗೆ ಗಾಂಜಾ ಖರೀದಿಸಿ ತಂದಿದ್ದ ಆರೋಪಿ ಸಂಪಿಗೆಹಳ್ಳಿ ಮುಖ್ಯರಸ್ತೆಯ ನೀಲಗಿರಿ ತೋಪಿನ ಮುಂಭಾಗದ ರಸ್ತೆಯಲ್ಲಿ ಮಾರಾಟ ಮಾಡುತ್ತಿದ್ದ.
Advertisement
ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿದ್ದ ಸಂಪಿಗೆಹಳ್ಳಿ ಠಾಣೆ ಪೊಲೀಸರು, ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿತನಿಂದ ಒಟ್ಟು 2 ಲಕ್ಷ ಮೌಲ್ಯದ 4 ಕೆ.ಜಿ. ಗಾಂಜಾ ವಶಕ್ಕೆ ಪಡೆದಿದ್ದು, ಆರೋಪಿ ವಿರುದ್ಧ ಪ್ರಕರಣ ದಾಖಲಾಗಿದೆ.