ತುಮಕೂರು: ಭ್ರಷ್ಟಾಚಾರ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ತುಮಕೂರು ಆರ್ ಟಿ ಒ ಕಚೇರಿ ಮೇಲೆ ಲೋಕಾಯುಕ್ತ ದಾಳಿ ನಡೆಸಿದ್ದಾರೆ. ತುಮಕೂರು ನಗರದ ಬಿಎಚ್ ರಸ್ತೆಯಲ್ಲಿರುವ ಆರ್ ಟಿ ಓ ಕಚೇರಿ ಮೇಲೆ 10ಕ್ಕೂ ಹೆಚ್ಚು ಅಧಿಕಾರಿಗಳ ತಂಡ ದಾಳಿ ಮಾಡಿ ದಾಖಲಾತಿ ಪರಿಶೀಲನೆ ಮಾಡುತ್ತಿದ್ದಾರೆ. ಕಚೇರಿಯನ್ನು ತಮ್ಮ ಸುಪರ್ದಿಗೆ ಪಡೆದುಕೊಂಡು ದಾಖಲಾತಿ ಪರಿಶೀಲನೆ ಮಾಡುತ್ತಿದ್ದು, ಅಧಿಕಾರಿಗಳ ಎದೆಯಲ್ಲಿ ಢವ ಢವ ಶುರುವಾಗಿದೆ.
Advertisement
ಇನ್ನೂ ಇಂದು ಬೆಳ್ಳಗೆ ಬಿಬಿಎಂಪಿ ಪಶ್ಚಿಮ ವಲಯದ ಕಲ್ಯಾಣ ವಿಭಾಗದ ಕಲ್ಯಾಣ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಫಲಾನುಭವಿಗಳ ಹಣವನ್ನು ಅಕ್ರಮವಾಗಿ ಸೊಸೈಟಿಗಳಿಗೆ ವರ್ಗಾಯಿಸಿದ್ದ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಬಿಬಿಎಂಪಿ ಕಲ್ಯಾಣಾಧಿಕಾರಿ ಲಲಿತಾ, ವಯ್ಯಾಲಿಕಾವಲ್ನಲ್ಲಿರುವ ಉಪ ಹಣಕಾಸು ನಿಯಂತ್ರಕ ಸತ್ಯಮೂರ್ತಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ ಮಾಡಿದ್ದರು.