ವಿಜಯಸಾಕ್ಷಿ ಸುದ್ದಿ, ಗದಗ: ಭಾರತದ ಸಂವಿಧಾನ ಸರ್ವರಿಗೂ ಸಮಾನತೆ ಒದಗಿಸಿ ಪ್ರಜಾಪ್ರಭುತ್ವ ಆಧಾರದ ಮೇಲೆ ಜನರ ಬದುಕಿನ ದಾರಿ ದೀಪವಾಗಿದೆ ಎಂದು ಮನೋರಮಾ ಕಾಲೇಜಿನ ಪ್ರಾಚಾರ್ಯ ಬಿ.ಎಸ್. ಹಿರೇಮಠ ಹೇಳಿದರು.
ನಗರದ ಮನೋರಮಾ ಕಾಲೇಜಿನಲ್ಲಿ ಜರುಗಿದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಂವಿಧಾನ ಭಾರತೀಯರ ಜೀವಾಳ. ಪ್ರತಿಯೊಬ್ಬರೂ ಸಂವಿಧಾನದ ಅಡಿಯಲ್ಲಿ ಬಾಳಿ ಬದುಕಿದರೆ ಜೀವನ ಸಿಹಿ ಜೇನಿನಂತೆ ಎಂದರು.
ಕನ್ನಡ ಉಪನ್ಯಾಸಕ ಪ್ರೊ. ಸಂಗಮೇಶ ಹಾದಿಮನಿ ವಿದ್ಯಾರ್ಥಿಗಳಿಗೆ ಸಂವಿಧಾನ ಪೀಠಿಕೆಯ ಪ್ರತಿಜ್ಞಾ ವಿಧಿ ಬೋಧಿಸಿದರು. ಸಭೆಯ ಅಧ್ಯಕ್ಷತೆಯನ್ನು ಸಂಸ್ಥೆಯ ಚೇರಮನ್ ಎನ್.ಎಮ್. ಕುಡತರಕರ ವಹಿಸಿದ್ದರು. ಈ ಸಂದರ್ಭದಲ್ಲಿ ಸಂಸ್ಥೆಯ ಕಾರ್ಯದರ್ಶಿ ಮಂಜುನಾಥ ಕುಡತರಕರ, ಆಡಳಿತಾಧಿಕಾರಿ ಕಿಶೋರ ಮುದಗಲ್ಲ, ನಿರ್ದೇಶಕರಾದ ಸಂಜಯ ಕುಡತರಕರ, ಚೇತನ ಕುಡತರಕರ, ಕಾಲೇಜಿನ ಸಂಯೋಜಕರುಗಳಾದ ಪ್ರೊ. ಸವಿತಾ ಪೂಜಾರ, ಪ್ರೊ. ಅಲ್ವಿನಾ ಡಿ, ಪ್ರೊ. ಚೈತ್ರಾ ಡಿ, ಪ್ರೊ. ಶಾಹಿದಾ ಶಿರಹಟ್ಟಿ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.



