Home Gadag News ನ.30ರಂದು ಎಸ್.ಎಸ್.ಎಲ್.ಸಿ ಫಲಿತಾಂಶ ಸುಧಾರಣೆ ಕುರಿತು ಶೈಕ್ಷಣಿಕ ಸಮಾವೇಶ

ನ.30ರಂದು ಎಸ್.ಎಸ್.ಎಲ್.ಸಿ ಫಲಿತಾಂಶ ಸುಧಾರಣೆ ಕುರಿತು ಶೈಕ್ಷಣಿಕ ಸಮಾವೇಶ

0
ನ.30ರಂದು ಎಸ್.ಎಸ್.ಎಲ್.ಸಿ ಫಲಿತಾಂಶ ಸುಧಾರಣೆ ಕುರಿತು ಶೈಕ್ಷಣಿಕ ಸಮಾವೇಶ
Spread the love

ವಿಜಯಸಾಕ್ಷಿ ಸುದ್ದಿ, ಗದಗ: ಕರ್ನಾಟಕ ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂಘದ ರಾಜ್ಯ ಘಟಕ, ಗದಗ ಜಿಲ್ಲಾ ಘಟಕ ಹಾಗೂ ಉಪನಿರ್ದೇಶಕರು ಶಾಲಾ ಶಿಕ್ಷಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಗದಗ ಜಿಲ್ಲಾ ಎಸ್.ಎಸ್.ಎಲ್.ಸಿ ಫಲಿತಾಂಶ ಸುಧಾರಣೆ ಕುರಿತು ಕಾರ್ಯಾಗಾರ ಹಾಗೂ ಶೈಕ್ಷಣಿಕ ಸಮಾವೇಶ-2024ನ್ನು ನ.30ರಂದು ಬೆಳಿಗ್ಗೆ 10.30ಕ್ಕೆ ನಗರದ ತೋಂಟದಾರ್ಯ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದೆ.

ಡಂಬಳ-ಗದಗ ಎಡೆಯೂರು ಶ್ರೀ ಜಗದ್ಗುರು ತೋಂಟದಾರ್ಯ ಸಂಸ್ಥಾನ ಮಠದ ಜಗದ್ಗುರು ತೋಂಟದ ಸಿದ್ಧರಾಮ ಮಹಾಸ್ವಾಮಿಗಳು ಕಾರ್ಯಕ್ರಮದ ದಿವ್ಯ ಸಾನ್ನಿಧ್ಯ ವಹಿಸಲಿದ್ದಾರೆ. ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಕಾರ್ಯಕ್ರಮದ ಘನ ಅಧ್ಯಕ್ಷತೆ ವಹಿಸಲಿದ್ದಾರೆ.

ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಕೆ. ಪಾಟೀಲ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.

ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಆರ್.ಎಸ್. ಬುರಡಿ ಉಪನ್ಯಾಸ ನೀಡಲಿದ್ದಾರೆ. ಶಾಲಾ ಶಿಕ್ಷಣ ಇಲಾಖೆ (ಅಭಿವೃದ್ಧಿ) ಉಪನಿರ್ದೇಶಕ ಜಿ.ಎಲ್. ಬಾರಾಟಕ್ಕೆ, ರಾಜ್ಯ ಘಟಕ ಹುಬ್ಬಳ್ಳಿಯ ಕರ್ನಾಟಕ ಮಾಧ್ಯಮ ಶಾಲಾ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಜಿ.ಆರ್. ಭಟ್, ಲಕ್ಕುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಆಯುಕ್ತ ಡಾ. ಶರಣು ಗೋಗೇರಿ, ವಿದ್ಯಾದಾನ ಶಿಕ್ಷಣ ಸಮಿತಿಯ ಅಧ್ಯಕ್ಷ ಧೀರೇಂದ್ರ ಹುಯಿಲಗೋಳ, ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಜಿಲ್ಲಾ ಘಟಕ ಅಧ್ಯಕ್ಷ ರವಿ ಗುಂಜಿಕರ, ಕನಕದಾಸ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ರವಿ ದಂಡಿನ, ಜಗದ್ಗುರು ತೋಂಟದಾರ್ಯ ವಿದ್ಯಾಪೀಠದ ಕಾರ್ಯದರ್ಶಿ ಶಿವಾನಂದ ಪಟ್ಟಣಶೆಟ್ಟರ, ಕರ್ನಾಟಕ ರಾಜ್ಯ ಸಹ-ಶಿಕ್ಷಕರ ಸಂಘ ಜಿಲ್ಲಾ ಘಟಕ ಅಧ್ಯಕ್ಷ ಬಿ.ಎಫ್. ಪೂಜಾರ, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ವ್ಹಿ.ವ್ಹಿ. ನಡುವಿನಮನಿ, ಮಂಗಳಾ ತಾಪಸ್ಕರ್, ಶಿಕ್ಷಣಾಧಿಕಾರಿ ಎಮ್.ಎಚ್. ಕಂಬಳಿ, ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎಮ್. ಫಡ್ನೇಶಿ, ಎಚ್.ಎನ್. ನಾಣಕಿನಾಯ್ಕ, ಡಾ. ಗುರುನಾಥ ಹೂಗಾರ, ಆರ್.ಎನ್. ಹುರಳಿ, ಜಿಲ್ಲಾ ಅಕ್ಷರ ದಾಸೋಹಾಧಿಕಾರಿ ಎಸ್.ಡಿ. ಕನವಳ್ಳಿ ಅತಿಥಿಗಳಾಗಿ ಆಗಮಿಸುವರು.

ಕರ್ನಾಟಕ ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂಘದ ಗದಗ ಜಿಲ್ಲಾ ಘಟಕದ ಪದಾಧಿಕಾರಿಗಳು, ತಾಲೂಕಾ ಘಟಕದ ಪದಾಧಿಕಾರಿಗಳು ಸರ್ವರಿಗೂ ಸ್ವಾಗತ ಕೋರಿದ್ದಾರೆ.


Spread the love

LEAVE A REPLY

Please enter your comment!
Please enter your name here