ಹಾವೇರಿ:- ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಬಾಲಕರು ನೀರು ಪಾಲಾದ ಘಟನೆ ಹಾವೇರಿ ಜಿಲ್ಲೆ ರಾಣಿಬೆನ್ನೂರು ತಾಲೂಕಿನ ಲಿಂಗದಹಳ್ಳಿ ಗ್ರಾಮದ ಬಳಿ ಜರುಗಿದೆ.
Advertisement
ಮೃತ ಬಾಲಕರನ್ನು 12 ವರ್ಷದ ರಾಕೇಶ ಕೂಲೇರ್, 12 ವರ್ಷದ ಸಂತೋಷ ಚನ್ನಗೌಡ ಎಂದು ಗುರುತಿಸಲಾಗಿದೆ.
ಇಬ್ಬರು ಬಾಲಕರು ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಓದುತ್ತಿದ್ದರು. ಕುಮುದ್ವತಿ ನದಿಯಲ್ಲಿ ಸ್ನಾನ ಮಾಡಲು ಹೋದಾಗ ಈಜಲು ಬಾರದೇ ಈ ಅವಘಡ ಸಂಭವಿಸಿದೆ.
ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು, ಮೃತದೇಹದ ಹೊರಗೆ ತೆಗೆಯುವ ಕಾರ್ಯ ಮಾಡಿದ್ದಾರೆ. ಘಟನೆ ಸಂಬಂಧ ರಾಣಿ ಬೆನ್ನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.