ಸಂವಿಧಾನದ ಪುಸ್ತಕ ಹಿಡಿದು ಸಂಸದೆಯಾಗಿ ಪ್ರಮಾಣವಚನ ಸ್ವೀಕರಿಸಿದ ಪ್ರಿಯಾಂಕಾ ಗಾಂಧಿ!

0
Spread the love

ನವದೆಹಲಿ: ಲೋಕಸಭೆಯ ಉಪ ಚುನಾವಣೆಯಲ್ಲಿ 4 ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರಿಂದ ಪ್ರಿಯಾಂಕಾ ಪ್ರಮಾಣ ವಚನ ಸ್ವೀಕರಿಸಿದರು. ಪ್ರಿಯಾಂಕಾ ಕೈಯಲ್ಲಿ ಸಂವಿಧಾನದ ಪುಸ್ತಕ ಹಿಡಿದಿದ್ದರು.ಅವರು ಕೇರಳದ  ಬ್ರೋಕೆಡ್ ಸೀರೆಯನ್ನು ಧರಿಸಿದ್ದರು

Advertisement

ಪ್ರಿಯಾಂಕಾ ಗಾಂಧಿ ಅವರು ಈಗ ಸಂಸತ್‌ ಪ್ರವೇಶಿಸಿದ ಗಾಂಧಿ ಕುಟುಂಬದ ಮೂರನೇ ಸದಸ್ಯರಾಗಿದ್ದಾರೆ. ಅವರ ತಾಯಿ ಸೋನಿಯಾ ಗಾಂಧಿ ರಾಜಸ್ಥಾನದಿಂದ ಪಕ್ಷದ ರಾಜ್ಯಸಭಾ ಸಂಸದರಾಗಿದ್ದಾರೆ. ನ.23 ರಂದು ನಡೆದ ಮತ ಎಣಿಕೆಯಲ್ಲಿ ಪ್ರಿಯಾಂಕಾ ಗಾಂಧಿ ವಾದ್ರಾ ವಯನಾಡ್‌ನಿಂದ ಭಾರಿ ಅಂತರದ ಗೆಲುವು ದಾಖಲಿಸಿದರು. ಅವರು 6.22 ಲಕ್ಷ ಮತಗಳನ್ನು ಪಡೆದರು. ಎರಡನೇ ಸ್ಥಾನದಲ್ಲಿರುವ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾದ ಸತ್ಯನ್ ಮೊಕೇರಿಗಿಂತ ನಾಲ್ಕು ಲಕ್ಷಕ್ಕಿಂತ ಹೆಚ್ಚು ಮತ್ತು ಬಿಜೆಪಿಯ ನವ್ಯಾ ಹರಿದಾಸ್‌ಗಿಂತ 5.12 ಲಕ್ಷ ಹೆಚ್ಚು ಮತಗಳ ಅಂತರದಿಂದ ಗೆದ್ದು ದಾಖಲೆ ಬರೆದಿದ್ದಾರೆ.


Spread the love

LEAVE A REPLY

Please enter your comment!
Please enter your name here