ಉತ್ತರ ಕನ್ನಡ: ತುಂಡಾದ ವಿದ್ಯುತ್ ಸರ್ವಿಸ್ ವೈರ್ ತಗುಲಿ ಬಾಲಕಿ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಮುಂಡವಾಡ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಸಾನ್ವಿ ಬಸವರಾಜ ಗೌಳಿ(8) ಮೃತ ವಿದ್ಯಾರ್ಥಿನಿಯಾಗಿದ್ದು,
ಮುಂಡವಾಡ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ 2ನೇ ತರಗತಿ ವಿದ್ಯಾಬ್ಯಾಸ ಮಾಡುತ್ತಿದ್ದಳು. ಬೋರ್‌ವೆಲ್ ಅಳವಡಿಸಲು ಅನಧಿಕೃತವಾಗಿ ವಿದ್ಯುತ್ ಸಂಪರ್ಕ ಪಡೆಯಲಾಗಿದ್ದು, ವೈರ್ ತುಂಡಾಗಿ ಶಾಲೆಯ ಶೌಚಾಲಯ ಒಳಗೆ ಬಿದ್ದಿತ್ತು.
ಆದ್ರೆ, ವಿಶ್ರಾಂತಿ ಸಮಯದಲ್ಲಿ ಮೂತ್ರ ವಿಸರ್ಜನೆಗೆ ತೆರಳಿದ್ದ ಸಾನ್ವಿ ಆ ತುಂಡಾಗಿ ಬಿದ್ದಿದ್ದ ವೈರ್ ತಗುಲಿ ಸಾವನ್ನಪ್ಪಿದ್ದಾಳೆ. ಹೆಸ್ಕಾಂ ಹಾಗೂ ಮುಖ್ಯ ಶಿಕ್ಷಕರ ನಿರ್ಲಕ್ಷ್ಯದಿಂದ ಈ ಸಾವು ಸಂಭವಿಸಿದ್ದು, ಗ್ರಾಮಸ್ಥರು ಹಾಗೂ ಕುಟುಂಬಸ್ಥರು ತೀವ್ರ ಆಕ್ರೋಶಗೊಂಡಿದ್ದಾರೆ. ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ತಹಶೀಲ್ದಾರ್ ಪ್ರವೀಣ್ ಹುಚ್ಚನ್ನವರ್ ಭೇಟಿ ನೀಡಿ ಪರಿಶೀಲಿಸಿದರು.