ವಿಜಯಸಾಕ್ಷಿ ಸುದ್ದಿ, ಗದಗ: ಇತ್ತೀಚೆಗೆ ಜರುಗಿದ ಕವಿವಿ ಧಾರವಾಡ ಗದಗ ಜಿಲ್ಲಾ ವಲಯ ಮಟ್ಟದ ಯುವಜನೋತ್ಸವದಲ್ಲಿ ಮನೋರಮಾ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ ಬಹುಮಾನ ಗೆದ್ದಿದ್ದಾರೆ.
ವಿಜೇತ ವಿದ್ಯಾರ್ಥಿಗಳನ್ನು ಅಭಿನಂದಿಸಿದ ಸಂಸ್ಥೆಯ ಚೇರಮನ್ ಎನ್.ಎಮ್. ಕುಡತರಕರ ಮಾತನಾಡಿ, ಮಹಾವಿದ್ಯಾಲಯದ ವಿದ್ಯಾರ್ಥಿಗಳು ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲಿ ಸಾಧನೆಯತ್ತ ಸಾಗಿರುವುದು ಸಂತಸ ತಂದಿದೆ ಎಂದರು.
ಪ್ರಾಚಾರ್ಯ ಬಿ.ಎಸ್. ಹಿರೇಮಠ ಮಾತನಾಡಿ, ವಿದ್ಯಾರ್ಥಿಗಳು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದಾಗ ಆಗುವ ಸಂತೋಷಕ್ಕೆ ಮಿತಿ ಇಲ್ಲ. ಬಹುಮಾನ ಪಡೆಯುವುದಕ್ಕಿಂತ ಭಾಗವಹಿಸುವಿಕೆ ಮುಖ್ಯವಾಗಿದೆ ಎಂದರು.
ಪಾಶ್ಚಾತ್ಯ ಗಾಯನದಲ್ಲಿ ಕಂಗನಾ ಪವಾರ ಪ್ರಥಮ, ಮೆಹಂದಿ ಸ್ಪರ್ಧೆಯಲ್ಲಿ ಉಮ್ಮಿ ಜವೇರಿಯಾ ಪ್ರಥಮ, ಭಾಷಣ ಸ್ಪರ್ಧೆಯಲ್ಲಿ ಸಯ್ಯದಾ ತಂಜಿಮ ಖಾಜಿ ಪ್ರಥಮ, ಮೈಮ್ ಸ್ಪರ್ಧೆಯಲ್ಲಿ ಇಂದ್ರ ಕುಮಾರ, ಅಭಿಷೇಕ, ಸಾಗರ, ಮೆಹಬೂಬ, ಅಮೋಘ ಹಾಗೂ ಪುರುಷೋತ್ತಮ ದ್ವಿತೀಯ, ಜಾನಪದ ಹಾಡಿನ ಸ್ಪರ್ಧೆಯಲ್ಲಿ ಅನಿತಾ, ಪ್ರಮೋದಿನಿ, ತನುಜಾ, ಅಕ್ಷತಾ, ಹಾಗೂ ಶೃತಿ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ.
ಸಾಧನೆಗೈದ ವಿದ್ಯಾರ್ಥಿಗಳಿಗೆ ಸಂಸ್ಥೆಯ ಆಡಳಿತಾಧಿಕಾರಿ ಕಿಶೋರ ಮುದಗಲ್ಲ, ನಿರ್ದೇಶಕರಾದ ಮಂಜುನಾಥ ಕುಡತರಕರ, ಸಂಜಯಕುಮಾರ ಕುಡತರಕರ, ಚೇತನ ಕುಡತರಕರ ಬಿಸಿಎ ಸಂಯೋಜಕರುಗಳಾದ ಪ್ರೊ. ಸವಿತಾ ಪೂಜಾರ, ಪ್ರೊ. ಅಲ್ವಿನಾ ಡಿ, ಪ್ರೊ. ಚೈತ್ರಾ ಡಿ, ಪ್ರೊ. ಶಾಹಿದಾ ಶಿರಹಟ್ಟಿ ಹಾಗೂ ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.



