ಗದಗ ಜಿಲ್ಲಾ ನೌಕರರ ಸಂಘದ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಮೂರನೇ ಬಾರಿಗೆ ಜಿಲ್ಲಾ ಅಧ್ಯಕ್ಷರಾಗಿ ರವಿ ಗುಂಜೀಕರ್ ಅವಿರೋಧ ಆಯ್ಕೆ ಆಗಿದ್ದು, ಈ ಮೂಲಕ ಹ್ಯಾಟ್ರಿಕ್ ಗೆಲುವು ಸಾಧಿಸಿದ್ದಾರೆ.
Advertisement

2024-29ರ ಅವಧಿಗೆ ನಡೆದ ಚುನಾವಣೆ ಇದಾಗಿದ್ದು, ಗದಗ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾಗಿದ್ದ ರವಿ ಗುಂಜೀಕರ್ ಅವರು ಜಿಲ್ಲಾ ಅಧ್ಯಕ್ಷರಾಗಿ ಆಯ್ಕೆ ಆಗಿದ್ದಾರೆ.

ಇನ್ನೂ ಜಿಲ್ಲಾ ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ರವಿ ಗುಂಜೀಕರ್‌ಗೆ ನೌಕರರು ಸನ್ಮಾನಿಸಿ ಗೌರವಿಸಿದರು. ಅಲ್ಲದೇ ಬಣ್ಣ ಹಚ್ಚಿ ಸಿಹಿ ತಿನಿಸುವ ಮೂಲಕ ಸಂಭ್ರಮಿಸಿದರು.

ಇನ್ನೂ ಜಿಲ್ಲಾ ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ರವಿ ಗುಂಜೀಕರ್‌ಗೆ ನೌಕರರು ಸನ್ಮಾನಿಸಿ ಗೌರವಿಸಿದರು. ಅಲ್ಲದೇ ಬಣ್ಣ ಹಚ್ಚಿ ಸಿಹಿ ತಿನಿಸುವ ಮೂಲಕ ಸಂಭ್ರಮಿಸಿದರು.