ಶಿಗ್ಗಾಂವಿ: ಕೆಪಿಸಿಸಿ ಅಧ್ಯಕ್ಷರ ಆಯ್ಕೆ ವಿಚಾರವಾಗಿ ಯಾವುದೇ ರೀತಿ ಒತ್ತಡ ಹಾಕಿಲ್ಲ ಎಂದು ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಹಾವೇರಿಯ ಜಿಲ್ಲೆಯ ಶಿಗ್ಗಾಂವಿಯಲ್ಲಿ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷ ಆಗ್ತಾರೆ ಅಂತ ಹೆಸರು ಓಡಾಡ್ತಾ ಇದೆ. ನಮ್ಮ ಉತ್ಸಾಹ ಅಷ್ಟೇ, ಅಂತಿಮವಾಗಿ ಪಕ್ಷ ತೀರ್ಮಾನ ಮಾಡಬೇಕು.
Advertisement
ನಾವೆಲ್ಲಾ ಕಾದು ನೋಡಬೇಕು ಅಷ್ಟೇ. ಈ ವಿಚಾರವಾಗಿ ನಾನು ಯಾವುದೇ ರೀತಿ ಒತ್ತಡ ಹಾಕಿಲ್ಲ. ಚುನಾವಣೆಯಲ್ಲಿ ಗೆಲ್ಲಿಸಿದಿವಿ, ತೃಪ್ತಿ ಇದೆ. ಮಂತ್ರಿಯಾಗಿ ಕೆಲಸ ಮಾಡ್ತಾ ಇದ್ದೇನೆ, ತೃಪ್ತಿ ಇದೆ ಎಂದಿದ್ದಾರೆ.ಇನ್ನೂ ಸಿಎಂ ಆಗಲಿಕ್ಕೆ ಆಸೆ ಇದೆ. ಅಧ್ಯಕ್ಷ ಆಗಲಿಕ್ಕೆ ಆಸೆ ಇದೆ. ಮಂತ್ರಿ ಆಗಲಿಕ್ಕೂ ಆಸೆ ಇದೆ. ಆದರೆ ಅಂತಿಮವಾಗಿ ಪಕ್ಷ ತೀರ್ಮಾನ ಮಾಡಲಿದೆ. ಪಕ್ಷದ ತೀರ್ಮಾನವೇ ಅಂತಿಮ ಎಂದಿದ್ದಾರೆ.