ಶಿಕ್ಷಣ ವ್ಯವಸ್ಥೆಯಲ್ಲಿ ರಾಜಕೀಯ ಬೇಡ: ಎಬಿವಿಪಿ ಕಾರ್ಯಕರ್ತರ ಒತ್ತಾಯ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ವಿಶ್ವವಿದ್ಯಾಲಯಗಳು ಶಿಕ್ಷಣದ ಭಾಗವಾಗಬೇಕೇ ಹೊರತು ರಾಜಕಾರಣದ ಕೇಂದ್ರವಾಗಬಾರದು ಎಂಬ ಉದ್ದೇಶದಿಂದ ಸಂವಿಧಾನಿಕ ಹುದ್ದೆಯಾದ ಗೌರವಾನ್ವಿತ ರಾಜ್ಯಪಾಲರಿಗೆ ವಿಶ್ವವಿದ್ಯಾಲಯಗಳ ಕುಲಾಧಿಪತಿ ಹುದ್ದೆಯು ರಾಜ್ಯಪಾಲರ ಬಳಿ ಇರುತ್ತದೆ. ಆದರೆ ರಾಜ್ಯ ಸರ್ಕಾರ ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ಯ ವಿಶ್ವವಿದ್ಯಾಲಯದ ಕುಲಾಧಿಪತಿ ಅಧಿಕಾರವನ್ನು ರಾಜ್ಯಪಾಲರ ಬದಲಾಗಿ ಮುಖ್ಯಮಂತ್ರಿಗಳಿಗೆ ನೀಡುವ ನಿರ್ಧಾರವನ್ನು ಸಂಪುಟ ಸಭೆ ಮಾಡಿರುವುದನ್ನು ಖಂಡಿಸಿ ಶನಿವಾರ ಎಬಿವಿಪಿ ಕಾರ್ಯಕರ್ತರು ವಿ.ವಿ ಆವರಣದಲ್ಲಿ ಪ್ರತಿಭಟನೆ ನಡೆಸಿದರು.

Advertisement

ಇದರಿಂದ ವಿಶ್ವವಿದ್ಯಾಲಯಗಳು ರಾಜಕೀಯ ಸ್ಥಾನವಾಗಿ ಪರಿವರ್ತನೆಯಾಗುವ ಎಲ್ಲ ಲಕ್ಷಣಗಳು ಕಂಡು ಬರುತ್ತಿವೆ. ಈ ನಡೆಯನ್ನು ಸರ್ಕಾರ ಕೂಡಲೇ ಕೈಬಿಟ್ಟು, ಮೊದಲಿನಂತೆ ರಾಜ್ಯಪಾಲರು ಕುಲಾಧಿಪತಿ ಹುದ್ದೆಯಲ್ಲಿ ಇರಬೇಕು ಎಂದು ಎಬಿವಿಪಿ ಕಾರ್ಯಕರ್ತರು ಒತ್ತಾಯಿಸಿದರು.

ರಾಜ್ಯ ಸರ್ಕಾರಕ್ಕೆ ವಿಶ್ವವಿದ್ಯಾಲಯಗಳ ಬಗ್ಗೆ ಕಾಳಜಿ ಇದ್ದರೆ ವಿಶ್ವವಿದ್ಯಾಲಯಗಳಿಗೆ ಅನುದಾನ ನೀಡಿ ಅವುಗಳ ಅಭಿವೃದ್ಧಿ ಮಾಡಬೇಕಾಗಿತ್ತು. ಆದರೆ ಇವತ್ತು ವಿದ್ಯಾರ್ಥಿಗಳು ಕಟ್ಟಿದ ಶುಲ್ಕದಿಂದ ವಿಶ್ವವಿದ್ಯಾಲಯಗಳನ್ನು ನಡೆಸುವ ಸ್ಥಿತಿಯನ್ನು ಸರ್ಕಾರ ನಿರ್ಮಾಣ ಮಾಡಿದೆ. ಸಾಂವಿಧಾನಿಕ ಹುದ್ದೆಗಳ ವಿರುದ್ಧ ಸರ್ಕಾರದ ಇಂತಹ ನಿರ್ಣಯಗಳಿಂದ ಉನ್ನತ ಶಿಕ್ಷಣ ವ್ಯವಸ್ಥೆಯಲ್ಲಿ ರಾಜಕೀಯ ಬೆರೆತಂತಾಗಿದೆ. ಕೂಡಲೇ ರಾಜ್ಯ ಸರ್ಕಾರ ಈ ನಿರ್ಣಯವನ್ನು ಕೈಬಿಟ್ಟು ಉನ್ನತ ಶಿಕ್ಷಣದ ಉನ್ನತೀಕರಣಕ್ಕಾಗಿ ಪ್ರಯತ್ನಿಸಬೇಕು ಎಂದು ಪ್ರತಿಭಟನಾ ನಿರತರು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕದ ಉತ್ತರ ಪ್ರಾಂತ್ಯ ಸಂಘಟನಾ ಕಾರ್ಯದರ್ಶಿ ಪೃಥ್ವಿಕುಮಾರ, ವಿಭಾಗ ಸಂಘಟನಾ ಕಾರ್ಯದರ್ಶಿ ಮಣಿಕಂಠ ಕಳಸದ, ಜಿಲ್ಲಾ ಪ್ರಮುಖರಾದ ಪುನೀತ ಬೆನಕನವಾರಿ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಅರುಣ ಬಾರ್ಕಿ, ರವಿ ನರೇಗಲ, ತೇಜಸ್ ಕನವಳ್ಳಿ, ಚಂದು ಪೂಜಾರಿ, ನಿಖಿತಾ ಸುತಾರ, ಕಾರ್ತಿಕ, ರವಿ, ಸಚಿನ, ಹರ್ಷಾ, ಮಲ್ಲಿಕಾರ್ಜುನ ಮುಂತಾದವರು ಉಪಸ್ಥಿತರಿದ್ದರು.


Spread the love

LEAVE A REPLY

Please enter your comment!
Please enter your name here