ಸ್ಲಂ ಘೋಷಣೆಗೆ ಸರ್ಕಾರವನ್ನು ಒತ್ತಾಯಿಸಲು ಮನವಿ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ:ರಾಜ್ಯದ ಖಾಸಗಿ ಮಾಲೀಕತ್ವದಲ್ಲಿರುವ ಜನವಸತಿ ಗುಡಿಸಲು ಪ್ರದೇಶಗಳನ್ನು ಸ್ಲಂ ಕಾಯ್ದೆ 1973ರ ಪ್ರಕಾರ ಯಾವುದೇ ಅಡತಡೆ ಇಲ್ಲದೇ ಸ್ಲಂ ಘೋಷಣೆ ಮಾಡಬೇಕೆಂದು ಬೆಳಗಾವಿಯಲ್ಲಿ ನಡೆಯಲ್ಲಿರುವ ಚಳಿಗಾಲ ಅಧಿವೇಶನದಲ್ಲಿ ಸ್ಲಂ ಜನರ ಪರವಾಗಿ ಮಾಡನಾಡುವಂತೆ ಒತ್ತಾಯಿಸಿ ಸ್ಲಂ ಜನಾಂದೋಲನ-ಕರ್ನಾಟಕ ಮತ್ತು ಗದಗ ಜಿಲ್ಲಾ ಸ್ಲಂ ಸಮಿತಿ ಮುಖಂಡರು ವಿಧಾನ ಪರಿಷತ್ ಸದಸ್ಯ ಎಸ್.ವ್ಹಿ. ಸಂಕನೂರ ಅವರಿಗೆ ಮನವಿ ಸಲ್ಲಿಸಿದರು.

Advertisement

ಸ್ಲಂ ಸಮಿತಿ ಕಾರ್ಯದರ್ಶಿ ಅಶೋಕ ಕುಸಬಿ ಮಾತನಾಡಿ, ಸ್ಲಂ ಜನರ ಸಮಸ್ಯೆಗಳನ್ನು ಗಮನಿಸಿ ಡಿಸಂಬರ್‌ನಲ್ಲಿ ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನ ಸಂದರ್ಭದಲ್ಲಿ ಖಾಸಗಿ ಭೂಮಿಲ್ಲಿರುವ ಗುಡಿಸಲು ಪ್ರದೇಶಗಳನ್ನು ಘೋಷಣೆ ಮಾಡಿ ಸ್ಥಳೀಯ ನಿವಾಸಿಗಳಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಕ್ರಮ ಕೈಗೊಳ್ಳಬೇಕೆಂದು ವಿನಂತಿಸಿದರು.

ಈ ಸಂದರ್ಭದಲ್ಲಿ ಗದಗ ಜಿಲ್ಲಾ ಸ್ಲಂ ಸಮಿತಿ ಅಧ್ಯಕ್ಷ ಇಮ್ತಿಯಾಜ ಆರ್.ಮಾನ್ವಿ, ಉಪಾಧ್ಯಕ್ಷ ರವಿಕುಮಾರ ಬೆಳಮಕರ, ಸ್ಲಂ ಸಮಿತಿ ಮುಖಂಡರಾದ ಮೆಹಬೂಬಸಾಬ ಬಳ್ಳಾರಿ, ಮೌಲಾಸಾಬ ಗಚ್ಚಿ, ಬಾಷಾಸಾಬ ಡಂಬಳ, ಪರವೀನಬಾನು ಹವಾಲ್ದಾರ, ದುರ್ಗಪ್ಪ ಮಣ್ಣವಡ್ಡರ, ಇಬ್ರಾಹಿಮ ಮುಲ್ಲಾ, ಮಕ್ತುಮಸಾಬ ಮುಲ್ಲಾನವರ, ಶಂಕ್ರಪ್ಪ ರೋಣ, ಖಾಜಾಸಾಬ ಇಸ್ಮಾಯಿಲನವರ ಮುಂತಾದವರು ಉಪಸ್ಥಿತರಿದ್ದರು.


Spread the love

LEAVE A REPLY

Please enter your comment!
Please enter your name here