ಬೆಂಗಳೂರು:- ಬೆಂಗಳೂರು ಹೊರವಲಯದ ಆನೇಕಲ್ ನ ಅನ್ನಪೂರ್ಣೇಶ್ವರಿ ಚಿತ್ರ ಮಂದಿರದ ರಸ್ತೆಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಟಿಪ್ಪರ್ ಲಾರಿ ಹಾಗೂ ಬೈಕ್ ನಡುವೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸವಾರ ಸಾವನ್ನಪ್ಪಿದ ಘಟನೆ ಜರುಗಿದೆ.
Advertisement
ಪ್ರೇಮ್ ಕುಮಾರ್ ಮೃತ ದುರ್ದೈವಿ ಎನ್ನಲಾಗಿದೆ. ಒನ್ ವೇನಲ್ಲಿ ವೇಗವಾಗಿ ದ್ವಿಚಕ್ರ ವಾಹನದಲ್ಲಿ ಪ್ರೇಮ್ ಬಂದಿದ್ದಾನೆ. ಈ ವೇಳೆ ಟಿಪ್ಪರ್ ಹಿಂಬದಿ ಚಕ್ರಕ್ಕೆ ಸಿಲುಕಿ ಸಾವನ್ನಪ್ಪಿದ್ದಾನೆ.
ಕಲ್ಲನ್ನು ತಪ್ಪಿಸಲು ಹೋಗಿ ಲಾರಿಯತ್ತ ಬೈಕ್‍ನ್ನು ಪ್ರೇಮ್ ತಿರುಗಿಸಿದ್ದಾನೆ. ಮೃತದೇಹವನ್ನು ಆನೇಕಲ್‍ನ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ.
ಸ್ಥಳೀಯ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.