ಹೊಸವರ್ಷಕ್ಕೆ ದಿನಗಣನೆ: ಸಿಸಿಬಿ ಫುಲ್ ಅಲರ್ಟ್, ಬೆಂಗಳೂರಿನಲ್ಲಿ ಹದ್ದಿನ ಕಣ್ಣು!

0
Spread the love

ಬೆಂಗಳೂರು:- ಹೊಸವರ್ಷಕ್ಕೆ ಇನ್ನೇನು ದಿನಗಣನೆ ಆರಂಭವಾಗಿದ್ದು, ಸಿಸಿಬಿ ಪೊಲೀಸರು ಫುಲ್ ಅಲರ್ಟ್ ಆಗಿದ್ದಾರೆ. ಅಲ್ಲದೇ ರಾಜಧಾನಿ ಬೆಂಗಳೂರಿನಲ್ಲಿ ಹದ್ದಿನ ಕಣ್ಣಿಟ್ಟಿದ್ದಾರೆ.

Advertisement

ಬೆಂಗಳೂರಿಗೆ ದೊಡ್ಡ ಮಟ್ಟದಲ್ಲಿ ಮಾದಕ ವಸ್ತುಗಳು ಬರುವ ಬಗ್ಗೆ ಗುಪ್ತಚರ ಇಲಾಖೆಗೆ ಮಾಹಿತಿ ಲಭ್ಯವಾಗಿದೆ. ಹೀಗಾಗಿ ಬೆಂಗಳೂರು ಸಿಸಿಬಿ ಪೊಲೀಸರು, ನಗರದ ಪ್ರತಿಷ್ಟಿತ ಹೋಟೆಲ್‌ಗಳು, ಹೊರವಲಯದ ಫಾರಂ ಹೌಸ್‌ಗಳು, ರೆಸಾರ್ಟ್‌ಗಳ ಮೇಲೆ ತೀವ್ರ ನಿಗಾವಹಿಸಿದ್ದಾರೆ.

ಅಷ್ಟೇ ಅಲ್ಲದೇ, ಏರ್‌ಪೋರ್ಟ್‌ಗಳು, ರೈಲ್ವೇ ನಿಲ್ದಾಣಗಳು, ಬಸ್ ನಿಲ್ದಾಣಗಳು, ಬೇರೆ ರಾಜ್ಯಗಳಿಂದ ನಗರಕ್ಕೆ ಬರುವ ರಾಷ್ಟೀಯ ಹೆದ್ದಾರಿಗಳಲ್ಲಿ ಗಮನ ಹರಿಸುವಂತೆ ಹಿರಿಯ ಅಧಿಕಾರಿಗಳು ಸೂಚಿಸಿದ್ದಾರೆ.

ಇದರ ಜೊತೆಗೆ ಹೊಸ ವರ್ಷಾಚರಣೆಗೆ ಈಗಾಗಲೇ ಬುಕ್ಕಿಂಗ್ ಕೂಡ ಓಪನ್ ಆಗಿದ್ದು, ಈ ನಿಟ್ಟಿನಲ್ಲಿ ಪೊಲೀಸರು ಸಿದ್ಧತೆ ನಡೆಸಿದ್ದಾರೆ.


Spread the love

LEAVE A REPLY

Please enter your comment!
Please enter your name here