ಬೆಂಗಳೂರು:-ವಾಹನ ಸವಾರರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, HSRP ನಂಬರ್ ಪ್ಲೇಟ್ ಅಳವಡಿಕೆ ಗಡುವು ಮತ್ತೆ ವಿಸ್ತರಣೆ ಮಾಡಿ ಸಾರಿಗೆ ಇಲಾಖೆ ಆದೇಶಿಸಿದೆ.
ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಸಲು ಈಗಾಗಲೇ ರಾಜ್ಯ ಸರ್ಕಾರ ನಾಲ್ಕು ಬಾರಿ ಗಡುವು ವಿಸ್ತರಣೆ ಮಾಡಿತ್ತು. ಇದೀಗ ಮತ್ತೆ ಡಿಸೆಂಬರ್ 31ರ ವರೆಗೆ HSRP ನಂಬರ್ ಪ್ಲೇಟ್ ಅಳವಡಿಸಲು ಗಡುವು ವಿಸ್ತರಿಸಿದೆ.
ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಕೆಗೆ ನವೆಂಬರ್ 30 ಕೊನೆ ದಿನಾಂಕವಾಗಿತ್ತು. ಇದೀಗ ಸಾರಿಗೆ ಇಲಾಖೆ ಈ ವರ್ಷದ ಕೊನೆಯ ದಿನದ ವರೆಗೆ ಗಡುವು ನೀಡಿದೆ.
ಕರ್ನಾಟಕದಲ್ಲಿರುವ ಸುಮಾರು 2 ಕೋಟಿಯಷ್ಟು ಹಳೆಯ ವಾಹನಗಳು, ಕೇವಲ 55 ಲಕ್ಷ ವಾಹನಗಳು ಮಾತ್ರ ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಸಿಕೊಂಡಿವೆ.
ಹೀಗಾಗಿ 01-04-2019 ರ ಹಿಂದಿನ ಎಲ್ಲಾ ವಾಹನಗಳು ಡಿಸೆಂಬರ್ 31ರೊಳಗೆ ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಗಳನ್ನು ಅಳವಡಿಸಿಕೊಳ್ಳಬೇಕು ಎಂದು ಸಾರಿಗೆ ಇಲಾಖೆ ಸೂಚಿಸಿದೆ. ಈ ಮೂಲಕ ಐದನೇ ಬಾರಿಗೆ ಗಡವು ವಿಸ್ತರಿಸಿದೆ.