ಬೆಂಗಳೂರು:- ಪಕ್ಷ ವಿರೋಧಿ ಹೇಳಿಕೆ ಕೊಡುತ್ತಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ಗೆ ಪಕ್ಷದ ಕೇಂದ್ರೀಯ ಶಿಸ್ತು ಸಮಿತಿ ಶೋಕಾಸ್ ನೋಟಿಸ್ ನೀಡಿದೆ.
10 ದಿನಗಳ ಒಳಗಾಗಿ ಉತ್ತರಿಸುವಂತೆಯೂ ಇಲ್ಲವಾದಲ್ಲಿ ಮುಂದಿನ ಕ್ರಮ ಕೈಗೊಳ್ಳುವುದಾಗಿಯೂ ಯತ್ನಾಳ್‌ಗೆ ಹೈಕಮಾಂಡ್ ಎಚ್ಚರಿಕೆ ನೀಡಿದೆ.
ಕರ್ನಾಟಕ ಬಿಜೆಪಿ ಬಣ ಜಗಳ ತಾರಕಕ್ಕೇರುತ್ತಿರುವ ಬೆನ್ನಲ್ಲೇ ಬಿಜೆಪಿ ಹೈಕಮಾಂಡ್ ಎಂಟ್ರಿಕೊಟ್ಟಿದೆ. ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಬಿವೈ ವಿಜಯೇಂದ್ರ ದೆಹಲಿಗೆ ತೆರಳಿ ವರಿಷ್ಠರನ್ನು ಭೇಟಿಯಾದ ಬೆನ್ನಲ್ಲೇ ಪಕ್ಷದ ವಿರುದ್ಧ ಸದಾ ಹೇಳಿಕೆಗಳನ್ನು ನೀಡುತ್ತಿರುವ ಬಂಡಾಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ಗೆ ಬಿಜೆಪಿ ಶಿಸ್ತು ಸಮಿತಿ ಶೋಕಾಸ್ ನೋಟಿಸ್ ನೀಡಿದೆ.
ಇನ್ನೂ ಬಿಜೆಪಿ ಹೈಕಮಾಂಡ್ ಬಿ ವೈ ವಿಜಯೇಂದ್ರ ಅವರನ್ನ ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿದ ದಿನದಿಂದಲೂ ಸಹ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಹಿರಂಗವಾಗಿಯೇ ವಿಜಯೇಂದ್ರ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದರು.
ಉಪಚುನಾವಣೆಯಲ್ಲಿ ಬಿಜೆಪಿ ಸೋಲು ಕಂಡ ಬಳಿಕ ಬಣ ಬಡಿದಾಟ ತೀವ್ರ ತಾರಕಕ್ಕೆ ಏರಿತ್ತು. ಇದೀಗ ಬಿಜೆಪಿ ಯತ್ನಾಳ್ ಗೆ ಶಾಕ್ ಕೊಟ್ಟಿದೆ.