41 ವರ್ಷದಿಂದ ಮಂತ್ರಿ ಆಗಿದ್ದೀನಿ. ಇಂಥಾದ್ದಕ್ಕೆಲ್ಲಾ ಹೆದರುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ

0
Spread the love

ತುಮಕೂರು: 41 ವರ್ಷದಿಂದ ಮಂತ್ರಿ ಆಗಿದ್ದೀನಿ. ಇಂಥಾದ್ದಕ್ಕೆಲ್ಲಾ ಹೆದರುವ ಪ್ರಶ್ನೆಯೇ ಇಲ್ಲ ಎಂದು ಶಾಸಕ ಸುರೇಶ್ ಗೌಡಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಟಾಮಗ್‌ ಕೊಟ್ಟಿದ್ದಾರೆ. ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು,

Advertisement

ನಾನು 41 ವರ್ಷದಿಂದ ಮಂತ್ರಿ ಆಗಿದ್ದೇನೆ. ಎರಡು ಬಾರಿ ವಿರೋಧ ಪಕ್ಷದ ನಾಯಕ, ಎರಡು ಬಾರಿ ಮುಖ್ಯಮಂತ್ರಿ ಆಗಿದ್ದೀನಿ. ಇಂಥಾದ್ದಕ್ಕೆಲ್ಲಾ ಹೆದರಿದ್ದರೆ ರಾಜಕಾರಣದಲ್ಲಿ ಉಳಿಯೋಕೆ ಆಗ್ತಿರಲಿಲ್ಲ. ಯಾವ ತಪ್ಪು ಮಾಡದ ನಾನು ಯಾವುದಕ್ಕೂ ಹೆದರುವ ಪ್ರಶ್ನೆಯೇ ಇಲ್ಲ ಎಂದು ವೇದಿಕೆಯಲ್ಲೆ ಉತ್ತರಿಸಿದರು.ಇನ್ನೂ ಮೈಸೂರಿನಲ್ಲೂ ಕ್ರೀಡಾಂಗಣ ನಿರ್ಮಾಣಕ್ಕೆ ಕರ್ನಾಟಕ ಕ್ರಿಕೆಟ್ ಸಂಸ್ಥೆ ಬೇಡಿಕೆ ಮುಂದಿಟ್ಟಿದೆ.

ಮೈಸೂರಿನಲ್ಲೂ ಜಾಗ ಕೊಡುತ್ತೇವೆ ಎಂದರು. ಗೃಹ ಸಚಿವರೂ, ಜಿಲ್ಲಾ ಉಸ್ತುವಾರಿ ಸಚಿವರಾದ ಜಿ.ಪರಮೇಶ್ವರ್, ಸಹಕಾರ ಸಚಿವರಾದ ಕೆ.ಎನ್.ರಾಜಣ್ಣ, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿ ಟಿ.ಬಿ.ಜಯಚಂದ್ರ ಹಾಗೂ ಜಿಲ್ಲೆಯ ಶಾಸಕರು, ಕರ್ನಾಟಕ ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷರಾದ ರಘುರಾಮ್ ಭಟ್ ಮತ್ತು ಇತರೆ ಪದಾಧಿಕಾರಿಗಳು ಉಪಸ್ಥಿತರಿದ್ದರು.


Spread the love

LEAVE A REPLY

Please enter your comment!
Please enter your name here